ಗುರುವಾರ , ಜೂನ್ 17, 2021
29 °C

ರಸಗೊಬ್ಬರದ ಕೊರತೆಯಿಲ್ಲ: ಸದಾನಂದ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಸೋಮವಾರ ಹೇಳಿದ್ದಾರೆ.

ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಯೂರಿಯಾದ ಅವಶ್ಯಕತೆ ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಗೆ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.   

‘ಲಾಕ್‌ಡೌನ್‌ ಅವಧಿಯಲ್ಲಿ ರಸಗೊಬ್ಬರ ಮಾರಾಟ ಶೇ 83 ರಷ್ಟು ಹೆಚ್ಚಾಗಿದೆ. ಇದು ಕೃಷಿ ಕ್ಷೇತ್ರದಲ್ಲಿ ದಾಖಲೆಯ ಬೆಳವಣಿಗೆಯಾಗಿದೆ. 2020ರ ಏಪ್ರಿಲ್- ಜೂನ್ ತಿಂಗಳ ನಡುವಿನ ಅವಧಿಯಲ್ಲಿ ಒಟ್ಟು 111.61 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 61.05 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ರಸಗೊಬ್ಬರ ಮಾರಾಟವಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಲಾಕ್‌ಡೌನ್‌ ಅವಧಿಯಲ್ಲಿ ಪ್ರಯಾಣಿಕ ರೈಲು ಸಂಚಾರ ಇರದ ಸಮಯದಲ್ಲಿಯೂ ರೈಲ್ವೆ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುವ ಮೂಲಕ ರಾಜ್ಯಗಳಿಗೆ ರಸಗೊಬ್ಬರವನ್ನು ಪೂರೈಸಲಾಗಿತ್ತು. ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ದೇಶದಾದ್ಯಂತ ರಸಗೊಬ್ಬರ ಘಟಕಗಳ ಕಾರ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗಿತ್ತು’ ಎಂದರು. 

‘ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಲಭ್ಯತೆ ಮತ್ತು ದಾಸ್ತಾನಿನ ಬಗ್ಗೆ ಸತತ ನಿಗಾ ವಹಿಸಲಾಗಿದೆ. ಬಿತ್ತನೆಗೆ ಮೊದಲು ರೈತರಿಗೆ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಬದ್ಧವಾಗಿದೆ’ ಎಂದರು. 

 

 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು