ಭಾನುವಾರ, ಸೆಪ್ಟೆಂಬರ್ 20, 2020
21 °C

ಕಾಶ್ಮೀರದಲ್ಲಿ ಯೋಧ ಕಣ್ಮರೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಯೋಧರೊಬ್ಬರು ಕಣ್ಮರೆಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಕುಲಗಾಮ್‌ ಜಿಲ್ಲೆಯಲ್ಲಿ ಅವರ ವಾಹನವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಯೋಧನನ್ನು ದುಷ್ಕರ್ಮಿಗಳು ಅಪಹರಿಸಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

‘ಸೋಫಿಯಾನ್‌ ಜಿಲ್ಲೆಯ ನಿವಾಸಿಯಾಗಿರುವ ಮುಜಾಫರ್‌ ಮಂಜೂರ್ ಅವರ ಹೆಸರಿನಲ್ಲಿ ಈ ವಾಹನವು ನೋಂದಣಿಯಾಗಿದೆ. ಮಂಜೂರ್‌ ಕೂಡ ಟೆರಿಟೋರಿಯಲ್‌ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರೂ ಸಂಪರ್ಕಕ್ಕೆ ಸಿಕ್ಕಿಲ್ಲ. ದಕ್ಷಿಣ ಕಾಶ್ಮೀರದ ಕುಲಗಾಮ್‌ ಜಿಲ್ಲೆಯ ರಾಮ್‌ಭಾಮಾ ಪ್ರದೇಶದಲ್ಲಿ ವಾಹನ ಪತ್ತೆಯಾಗಿದೆ. ಇದಕ್ಕೆ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳ ಪತ್ತೆ ಕಾರ್ಯ ಆರಂಭಿಸಿದ್ದೇವೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು