ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲೀಗ್‌ ಜಮಾತ್: ಇಂಡೊನೇಷ್ಯಾದ 150 ಮಂದಿಗೆ ಜಾಮೀನು ಮಂಜೂರು

Last Updated 14 ಜುಲೈ 2020, 15:30 IST
ಅಕ್ಷರ ಗಾತ್ರ

ನವದೆಹಲಿ: ವೀಸಾ ನಿಯಮ ಮತ್ತು ಸರ್ಕಾರದ ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತಬ್ಲೀಗ್‌ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ಇಂಡೊನೇಷ್ಯಾದ 150 ಪ್ರಜೆಗಳಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಧೀಶರಾದ ಗುರ್‌ಮೊಹಿನಾ ಕೌರ್ ಅವರು ಆರೋಪಿಗಳಿಂದ ತಲಾ ₹10 ಸಾವಿರ ವೈಯಕ್ತಿಕ ಬಾಂಡ್ ಬರೆಸಿಕೊಂಡು ಜಾಮೀನು ಮಂಜೂರು ಮಾಡಿದ್ದಾರೆ.

ಈ ಪ್ರಕರಣದಲ್ಲಿ 35 ವಿವಿಧ ದೇಶಗಳ 682 ವಿದೇಶಿ ಪ್ರಜೆಗಳಿಗೆ ದೆಹಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.36 ದೇಶಗಳ 957 ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು 59 ಆರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT