ಶನಿವಾರ, ಜುಲೈ 31, 2021
25 °C

ತೆಲಂಗಾಣ: 12ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗಿಲ್ಲ ಪೂರಕ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: 2020ನೇ ಸಾಲಿನಲ್ಲಿ ಅನುತ್ತೀರ್ಣಗೊಂಡಿರುವ 12ನೇ ತರಗತಿಯ ವಿದ್ಯಾರ್ಥಿಗಳ ಪೂರಕ ಪರೀಕ್ಷೆಯನ್ನು ರದ್ದುಗೊಳಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ಕೋವಿಡ್‌-19 ಹಿನ್ನೆಲೆಯಲ್ಲಿ 12ನೇ ತರಗತಿಯ ಪೂರಕ ಪರೀಕ್ಷೆಗೆ ಹಾಜರಾಗಬೇಕಿದ್ದ 1.47 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದಾಗಿ ಘೋಷಿಸಲಾಗಿದ್ದು, ಜುಲೈ 31ರ ಒಳಗೆ ಅಂಕ ಪತ್ರಗಳನ್ನು ಮೆಮೊ ಮೂಲಕ ನೀಡಲಾಗುವುದು ಎಂದು ತೆಲಂಗಾಣ ಸರ್ಕಾರ ತಿಳಿಸಿದೆ. 

ಈ ಬಗ್ಗೆ ಹೇಳಿಕೆ ನೀಡಿರುವ ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದಿರಾ ರೆಡ್ಡಿ, 'ತೆಲಂಗಾಣ ಸರ್ಕಾರ 12ನೇ ತರಗತಿಯ ಪೂರಕ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಅನುತ್ತೀರ್ಣರಾಗಿರುವ 1,47,000 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದಾಗಿ ಘೋಷಿಸಲಾಗುತ್ತದೆ' ಎಂದು ಸ್ಪಷ್ಟಪಡಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು