ಶನಿವಾರ, ಜುಲೈ 31, 2021
27 °C

15ರಂದು ಭಾರತ, ಯುರೋಪ್‌ ಒಕ್ಕೂಟ ಶೃಂಗಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದಹೆಲಿ: ಭಾರತ ಮತ್ತು ಯುರೋಪ್‌ ಒಕ್ಕೂಟದ ನಡುವೆ 15ನೇ ಶೃಂಗಸಭೆಯು ವಿಡಿಯೊ ಕಾನ್ಫರೆನ್ಸ್‌ ಮೂಲಕ ಜುಲೈ 15ರಂದು ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಯುರೋಪಿಯನ್‌ ಕೌನ್ಸಿಲ್‌ ಅಧ್ಯಕ್ಷ ಚಾರ್ಲ್ಸ್‌ ಮಿಷೆಲ್‌ ಹಾಗೂ ಯುರೋಪಿಯನ್‌ ಆಯೋಗದ ಅಧ್ಯಕ್ಷ ಉರ್ಸುಲಾ ವಾನ್‌ ಡೆರ್‌ ಲೇಯೆನ್‌ ಅವರೊಂದಿಗೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. 

ವಿಶ್ವಸಂಸ್ಥೆ ಹಾಗೂ ವಿಶ್ವ ವಾಣಿಜ್ಯ ಸಂಸ್ಥೆಯ ವಿಚಾರದಲ್ಲಿ ‌ ನಿಯಮ ಆಧಾರಿತ ಪರಿಣಾಮಕಾರಿ ಬಹುಪಕ್ಷೀಯ ನಡೆಯನ್ನು ಉತ್ತೇಜಿಸಲು ಈ ಶೃಂಗಸಭೆ ನೆರವಾಗಲಿದೆ. ಪ್ರಜಾಪ್ರಭುತ್ವದ ಆಧಾರದ ಮೇಲೆ ಈ ಯುರೋಪ್‌ ಮತ್ತು ಭಾರತದ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಈ ಶೃಂಗಸಭೆ ನೆರವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಭದ್ರತೆ, ಹವಾಮಾನ, ಪರಿಸರ, ವ್ಯಾಪಾರ ಮತ್ತು ಹೂಡಿಕೆ, ಡಿಜಿಟಲ್ ಆರ್ಥಿಕತೆ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಯಲಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು