ಸೋಮವಾರ, ಆಗಸ್ಟ್ 2, 2021
28 °C

ಎನ್‌ಎಲ್‌ಎಸ್‌ಐಯು: ಸ್ಥಳೀಯರಿಗೆ ಮೀಸಲು ಪ್ರಶ್ನಿಸಿದ್ದ ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾದಲ್ಲಿ ಶೇ 25ರಷ್ಟು ಸ್ಥಾನಗಳನ್ನು ಸ್ಥಳೀಯರಿಗೆ ಮೀಸಲಾಗಿಡಲು ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ತಳ್ಳಿ ಹಾಕಿತು.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸುಬ್ರಮಣಿಯಂ ಪ್ರಸಾದ್‌ ಅವರನ್ನು ಒಳಗೊಂಡ ಪೀಠವು, ‘ ಮನವಿ ಮಾಡಲು ಕರ್ನಾಟಕದಲ್ಲಿ ಸಮರ್ಥ ನ್ಯಾಯಾಲಯ ಇದೆ ಮತ್ತು ವಿಶ್ವವಿದ್ಯಾಲಯವು ಅಲ್ಲಿಯೇ ಇರುವುದರಿಂದ ಈ ಅರ್ಜಿಯನ್ನು ವಜಾಗೊಳಿಸಲಾಗುವುದು’ ಎಂದು ಸ್ಪಷ್ಟಪಡಿಸಿತು.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.