ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಕುಲ್ಗಾಮ್‌ನಲ್ಲಿ ಎನ್‌ಕೌಂಟರ್‌, ಮೂವರು ಉಗ್ರರ ಹತ್ಯೆ

Last Updated 17 ಜುಲೈ 2020, 8:46 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರುಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದುಪೊಲೀಸರು ತಿಳಿಸಿದ್ದಾರೆ.

ಕುಲ್ಗಾಮ್‌ನ ನಾಗ್ನಾಡ್‌–ಚಿಮ್ಮರ್‌ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ.

'ಕುಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರಲ್ಲಿ ಒಬ್ಬನನ್ನು ಪಾಕಿಸ್ತಾನದ ವಾಲಿದ್ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಅವರು ಇಲ್ಲಿ ಸಕ್ರಿಯರಾಗಿದ್ದರು' ಎಂದು ಕಾಶ್ಮೀರ ಪೊಲೀಸ್ ಆಯುಕ್ತ ವಿಜಯ್‌ ಕುಮಾರ್‌ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT