ಶುಕ್ರವಾರ, ಆಗಸ್ಟ್ 6, 2021
25 °C

ಮಹಿಳೆ ಜತೆ ಅನುಚಿತ ವರ್ತನೆ; ಇನ್‌ಸ್ಪೆಕ್ಟರ್‌ಗೆ ಕಡ್ಡಾಯ ನಿವೃತ್ತಿ ಶಿಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುಚಿರಾಪಳ್ಳಿ (ತಮಿಳುನಾಡು): ಮಹಿಳೆಯೊಬ್ಬರಿಗೆ ಮಧ್ಯರಾತ್ರಿ ಕರೆ ಮಾಡಿ ಅನುಚಿತವಾಗಿ ಮಾತನಾಡಿದ ಆರೋಪದ ಮೇಲೆ ಪೊಲೀಸ್‌ ಇನ್‌ಸ್ಪೆಕ್ಟರ್‌ಗೆ ಕಡ್ಡಾಯ ನಿವೃತ್ತಿ ಶಿಕ್ಷೆ ವಿಧಿಸಲಾಗಿದೆ.

ಪೆರಂಬಲೂರು ಜಿಲ್ಲೆಯ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರೊಂದನ್ನು ನೀಡಿದ್ದರು. ಈ ಸಂಬಂಧ, ಅದೇ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಹಿಳೆಗೆ ಮಧ್ಯರಾತ್ರಿ ಕರೆ ಮಾಡಿ ಅನಗತ್ಯವಾದ ಮಾತುಕತೆ ನಡೆಸಿದ್ದಾರೆ. 

‘ಪ್ರಕರಣ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರ ಮೇಲೆ ವಿಚಾರಣೆ ನಡೆಸಲಾಗಿದ್ದು, ಮಹಿಳೆಯ ಆರೋಪದಲ್ಲಿ ಸತ್ಯಾಂಶ ಇದೆ ಎಂಬುದು ಕಂಡುಬಂದಿದೆ. ಈ ಹಿಂದೆಯೂ ಈ ಇನ್‌ಸ್ಪೆಕ್ಟರ್‌ ವಿರುದ್ಧ ಇದೇ ಬಗೆಯ ಆರೋಪಗಳಿವೆ. ಹಾಗಾಗಿಯೇ ಅವರನ್ನು ಪೆರಂಬಲೂರಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿಂದಿನ ಆರೋಪಗಳನ್ನು ಪರಿಗಣಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು