ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ತ್ರಿಭಾಷಾ ಸೂತ್ರ ತಿರಸ್ಕರಿಸಿದ ತಮಿಳುನಾಡು ಸರ್ಕಾರ

Last Updated 3 ಆಗಸ್ಟ್ 2020, 10:05 IST
ಅಕ್ಷರ ಗಾತ್ರ

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿಯಡಿ(ಎನ್‌ಇಪಿ) ಪ್ರಸ್ತಾಪಿಸಲಾದ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ ಸೋಮವಾರ ತಿರಸ್ಕರಿಸಿದೆ.

ರಾಜ್ಯದಲ್ಲಿ ಅನುಸರಿಸುತ್ತಿರುವ ಎರಡು ಭಾಷೆಯ ನೀತಿಯನ್ನು ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ತಮಿಳುನಾಡಿನಲ್ಲಿ ಹಲವು ವರ್ಷಗಳಿಂದ ದ್ವಿಭಾಷಾ ನೀತಿಯನ್ನು ಅನುಸರಿಸಲಾಗುತ್ತದೆ. ಈ ನೀತಿಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ತ್ರಿಭಾಷಾ ಸೂತ್ರವನ್ನುಇಲ್ಲಿ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ. ಮೊದಲಿನಂತೆ ರಾಜ್ಯದಲ್ಲಿ ತಮಿಳು ಮತ್ತು ಇಂಗ್ಲಿಷ್‌ ಭಾಷೆಯನ್ನು ಮಾತ್ರ ಕಲಿಸಲಾಗುವುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT