ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳ ಬಂಧನ

Last Updated 29 ಜುಲೈ 2020, 13:51 IST
ಅಕ್ಷರ ಗಾತ್ರ

ಭೋಪಾಲ್‌: ಇಬ್ಬರು ಅಪ್ರಾಪ್ತೆಯರಮೇಲೆ ಅತ್ಯಾಚಾರವೆಸಗಿದ ಆರೋಪದಡಿ 17 ವರ್ಷದ ಯುವಕ ಸೇರಿದಂತೆ ಇಬ್ಬರನ್ನು ಪೊಲೀಸರುಬುಧವಾರ ಬಂಧಿಸಿದ್ದಾರೆ.

‘ಜುಲೈ 26ರಂದು ಆರೋಪಿಯೊಬ್ಬ ಬಾಲಕಿಯನ್ನು ಅಮರನಾಥ ಕಾಲೊನಿ ಬಳಿ ಭೇಟಿಯಾಗುವಂತೆ ಹೇಳಿದ್ದ. ಅವನ ಮಾತಿನಂತೆ ಸ್ಥಳಕ್ಕೆ ಬಂದ 16 ಮತ್ತು 14 ವರ್ಷದ ಅಪ್ರಾಪ್ತೆಯರನ್ನು ಹತ್ತಿರದಲ್ಲೇ ಇದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಆರೋಪಿಗಳಿಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ಅಂಜನಾ ಧ್ರುವ ತಿಳಿಸಿದ್ದಾರೆ.

ಈ ಸಂಬಂಧ ಮಂಗಳವಾರ ರಾತ್ರಿ ದೂರು ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT