ಬುಧವಾರ, ಜುಲೈ 28, 2021
28 °C

ರಾಜಸ್ಥಾನ ಸರ್ಕಾರ ಅಸ್ಥಿರತೆಗೆ ಬಿಜೆಪಿ ಕಾರಣ: ಕಾಂಗ್ರೆಸ್‌ ಆರೋಪ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರದ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್‌ ಸೋಮವಾರ ಆರೋಪ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ದೇಶದಲ್ಲಿ ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದ್ದು, ಆರ್ಥಿಕ ಕುಸಿತದ ಜೊತೆ ನಿರುದ್ಯೋಗ ಹೆಚ್ಚುತ್ತಿದ್ದರೂ ಕೇಂದ್ರ ಸರ್ಕಾರ ಗಮನ ಕೊಡದೇ ರಾಜ್ಯಗಳಲ್ಲಿನ ಕಾಂಗ್ರೆಸ್‌ ಸರ್ಕಾರಗಳನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಕಾಂಗ್ರೆಸ್‌ ಜನಪರ ಸೇವೆ ಮಾಡುತ್ತಿದ್ದು ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ತೊಡಗಿದೆ. ಆದರೆ ಬಿಜೆಪಿ ಉದ್ಯೋಗ ನಷ್ಟಕ್ಕೆ ಪರಿಹಾರ ಕೊಡುತ್ತಿಲ್ಲ, ಅದು ಕೊರೊನಾ ವಿರುದ್ಧದ ಹೋರಾಟದ ಬದಲು ಕಾಂಗ್ರೆಸ್‌ ವಿರುದ್ಧದ ಹೋರಾಟಕ್ಕೆ ನಿಂತಿದೆ. ಗಣತಂತ್ರ ಸರ್ಕಾರಗಳನ್ನು ಬುಡಮೇಲು ಮಾಡುವ ಕೆಲಸದಲ್ಲಿ ಬಿಜೆಪಿ ತೊಡಗಿದೆ. ಇದೇ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಇರುವ ವ್ಯತ್ಯಾಸ ಎಂದು ಟ್ವೀಟ್‌ ಮಾಡಿದೆ.

ಆದರೆ ಕಾಂಗ್ರೆಸ್‌ ಪಕ್ಷ ಬಿಜಿಪಿಯಂತಲ್ಲ, ಜನರಿಗಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ಪಕ್ಷ ಟ್ವೀಟ್‌ ಮಾಡಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ನಡುವಣ ಭಿನ್ನಮತ ತಾರಕಕ್ಕೇರಿದೆ. ಕಾಂಗ್ರೆಸ್‌ ನೇತೃತ್ವದ ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಆರೋಪದ ತನಿಖೆಗೆ ಸಂಬಂಧಿಸಿ ಪೈಲಟ್‌ಗೆ ಪೊಲೀಸರು (ವಿಶೇಷ ಕಾರ್ಯಪಡೆ–ಎಸ್‌ಒಜಿ) ನೀಡಿದ ನೋಟಿಸ್‌, ಭಿನ್ನಮತ ತೀವ್ರಗೊಳ್ಳಲು ಕಾರಣವಾಗಿದೆ. ಭಿನ್ನಮತ ಶಮನಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಶ್ರಮಿಸುತ್ತಿದೆ.

ಇತ್ತ ಸಚಿನ್‌ ಪೈಲಟ್‌ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು