ಲಖನೌ: ಎನ್ಕೌಂಟರ್ನಲ್ಲಿ ಸಾವಿಗೀಡಾದ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಕುರಿತು ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉತ್ತರಪ್ರದೇಶಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಕಾರು ಪಲ್ಟಿಯಾದ ಬಳಿಕ ವಿಕಾಸ್ ದುಬೆ ಪೊಲೀಸರಿಂದ ಶಸ್ತ್ರಾಸ್ತ್ರ ಕಸಿದುಕಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹೀಗಾಗಿ ಪೊಲೀಸರು ಗುಂಡು ಹಾರಿಸಿದ್ದರು. ಆಗ ಆತನಿಗೆ ಗಾಯವಾಗಿತ್ತು’ ಎಮದು ತಿಳಿಸಿದ್ದಾರೆ.

ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿರುವುದನ್ನು ಆಸ್ಪತ್ರೆಯವರು ಖಚಿತಪಡಿಸಿದರು. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಿದ್ದೇವೆ’ ಎಂದೂ ಹೇಳಿದ್ದಾರೆ.

ಕಳೆದವಾರ (ಜುಲೈ 3ರಂದು) ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ಪೊಲೀಸರು ಮೃತಪಟ್ಟಿದ್ದರು.ಮೃತಪಟ್ಟವರಲ್ಲಿ ಒಬ್ಬ ಡಿವೈಎಸ್ಪಿ, ಮೂವರು ಸಬ್ಇನ್ಸ್ಪೆಕ್ಟರ್ಗಳೂ ಸೇರಿದ್ದರು. ಇದೇ ವೇಳೆಒಬ್ಬ ನಾಗರಿಕ ಮತ್ತು ಆರು ಪೊಲೀಸರಿಗೆಗಾಯಗಳಾಗಿದ್ದವು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೆಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದರು.

ಗುರುವಾರ ಉಜ್ಜಯಿನಿಯಲ್ಲಿ ಸೆರೆಸಿಕ್ಕಿದ್ದ ದುಬೆಯನ್ನು ಮಧ್ಯಪ್ರದೇಶ ಪೊಲೀಸರು, ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆತನನ್ನು ಕಾನ್ಪುರಕ್ಕೆ ಕರೆದೊಯ್ಯವ ವೇಳೆ ವಾಹನ ಪಲ್ಟಿಯಾಗಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆತ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿತ್ತು.

ವಿಶೇಷ ಕಾರ್ಯಪಡೆ ನಡೆಸಿದಬಂಧನ ಕಾರ್ಯಾಚರಣೆ ವೇಳೆ, ಬುಧವಾರ ಒಬ್ಬ ಹಾಗೂ ಗುರುವಾರ ಇಬ್ಬರು ಸಹಚರರು ಮೃತಪಟ್ಟಿದ್ದರು. ದುಬೆಯ ಪತ್ನಿ ಮತ್ತು ಮಗನನ್ನುಗುರುವಾರ ಸಂಜೆ ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.