ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಉತ್ತರಪ್ರದೇಶ: ವಿಕಾಸ್‌ ದುಬೆ ಆಪ್ತ ಸಹಾಯಕನ ಆಸ್ತಿ ಬಗ್ಗೆ ತನಿಖೆ ನಡೆಸಲು ಆಗ್ರಹ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಲಖನೌ: ಎನ್‌ಕೌಂಟರ್‌ನಲ್ಲಿ ಹತನಾದ ರೌಡಿ ಶೀಟರ್‌ ವಿಕಾಸ್‌ ದುಬೆಯ ಆಪ್ತ ಸಹಾಯಕ ಜೈ ವಾಜಪೇಯಿ ಆಕ್ರಮ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಉತ್ತರ ಸರ್ಕಾರ ಒತ್ತಾಯಿಸಿದೆ. 

‍ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು (ಇಡಿ) ಸರ್ಕಾರ ವಿನಂತಿಸಿದೆ. 

ಗ್ಯಾಂಗ್‌ಸ್ಟರ್‌ ವಿಕಾಸ್‌ ದುಬೆ, ಜುಲೈ 11 ರಂದು ನಡೆದಿದ್ದ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. 

ಹಲವು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ ದುಬೆಯನ್ನು ಬಂಧಿಸಲು ಜುಲೈ 2 ರಂದು ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ಹೋಗಿದ್ದ ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆದು ಎಂಟು ಮಂದಿ ಪೊಲೀಸರು ಹತರಾಗಿದ್ದರು. ಪ್ರಮುಖ ಆರೋಪಿ ದುಬೆ ಬಳಿಕ ತಲೆಮರೆಸಿಕೊಂಡಿದ್ದ. ದುಬೆನನ್ನು ಬಂಧಿಸಲು ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಈತನನ್ನು ಮಧ್ಯಪ್ರದೇಶ ಪೊಲೀಸರು ಉಜ್ಜಯಿನಿಯಲ್ಲಿ ಬಂಧಿಸಿ ಉತ್ತರಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು. 

ಇದೀಗ ಪೊಲೀಸರು ದುಬೆ ಸಹಚರರನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ. 

ಇನ್ನಷ್ಟು...

ವಿಕಾಸ್‌ ದುಬೆ ರಕ್ತ ಚರಿತ್ರೆ: 30 ವರ್ಷ, 60ಕ್ಕೂ ಹೆಚ್ಚು ಅಪರಾಧ ಪ್ರಕರಣ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು