ಮಂಗಳವಾರ, ಆಗಸ್ಟ್ 4, 2020
26 °C

ದುಬೆ ಬಂಧನ– ಸ್ಪಷ್ಟನೆಗೆ ಅಖಿಲೇಶ್‌ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ರೌಡಿ ಶೀಟರ್‌ ವಿಕಾಸ್‌ ದುಬೆಯನ್ನು ಪೊಲೀಸರು ಬಂಧಿಸಿದರೇ ಅಥವಾ ಆತನೇ ಪೊಲೀಸರ ಮುಂದೆ ಶರಣಾದನೇ ಎಂಬುದನ್ನು ಉತ್ತರಪ್ರದೇಶ ಸರ್ಕಾರ ಸ್ಪಷ್ಟ ಪಡಿಸಬೇಕು ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಒತ್ತಾಯಿಸಿದ್ದಾರೆ.

ಆತನ ದೂರವಾಣಿ ಕರೆಗಳ ದಾಖಲೆಗಳನ್ನು ಬಹಿರಂಗಪಡಿಸಬೇಕು. ಆಗ ಆತನ ಸಂಪರ್ಕದಲ್ಲಿದ್ದವರ ಬಗ್ಗೆ ತಿಳಿದು ಬರಲಿದೆ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಎಂಟು ಪೊಲೀಸರನ್ನು ಹತ್ಯೆಗೈದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ವಿಕಾಸ್‌ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಕೂಡ ದುಬೆ ಬಂಧನವನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು