ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಕೋವಿಡ್‌ 19’ರ ವಿರುದ್ಧದ ಹೋರಾಟದಲ್ಲಿ ನಾವೇ ಮುಂದು: ಡೊನಾಲ್ಡ್‌ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸಮರ್ಥನೆ
Last Updated 4 ಆಗಸ್ಟ್ 2020, 9:41 IST
ಅಕ್ಷರ ಗಾತ್ರ

ವಾಷಿಂಗ್ಟನ್:'ದೊಡ್ಡ ರಾಷ್ಟ್ರಗಳಿಗೆ ಹೋಲಿಸಿದರೆ 'ಕೋವಿಡ್‌ 19’ ಸಾಂಕ್ರಾಮಿಕ ರೋಗದ ವಿರುದ್ಧ ಅಮೆರಿಕ ಉತ್ತಮ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಭಾರತ ಮತ್ತು ಚೀನಾ ಸೋಂಕು ನಿರ್ವಹಣೆಯಲ್ಲಿ ತೀವ್ರ ಸಮಸ್ಯೆ ಎದುರಿಸುತ್ತಿವೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೇಳಿರುವುದಾಗಿ 'ಎನ್‌ಡಿಟಿವಿ’ ವರದಿ ಮಾಡಿದೆ.

'ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಭಾರತ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಚೀನಾ ಕೂಡ ಸೋಂಕಿನ ಅಲೆಯನ್ನು ಪರಿಣಾಮಕಾರಿಯಾಗಿ ಸೋಂಕಿನ ಅಲೆಯನ್ನು ಎದುರಿಸುವಲ್ಲಿ ವಿಫಲವಾಗಿದೆ. ಅಲ್ಲೀಗ ಎರಡನೇ ಸುತ್ತಿನ ಕೊರೊನಾ ಸೋಂಕಿನ ಅಲೆ ಆರಂಭವಾಗಿದೆ. ಇಂಥ ರಾಷ್ಟ್ರಗಳಿಗೆ ಹೋಲಿಸಿದರೆ ಅಮೆರಿಕ ಕೋವಿಡ್‌ 19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದೆ’ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರದವರೆಗಿನ ಮಾಹಿತಿ ಪ್ರಕಾರ ಭಾರತದಲ್ಲಿ ಸೋಂಕಿತರ ಪ್ರಮಾಣ 18,55,745ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 52,050 ಜನರಿಗೆ ಸೋಂಕು ದೃಢಪಟ್ಟಿದೆ. ಚೀನಾದಲ್ಲೂ ಎರಡನೇ ಸುತ್ತಿನಲ್ಲಿ ಕೊರೊನಾ ಸೋಂಕು ತಗಲುವ ಭೀತಿ ಎದುರಾಗಿದ್ದು, ಜುಲೈ 29ರ ನಂತರ ನಿತ್ಯ ಸೋಂಕಿತರ ಪ್ರಮಾಣ 100 ಗಡಿ ದಾಡುತ್ತಿದೆ ಎಂದು ಅಂಕಿ ಅಂಶಗಳ ಸಹಿತ ಅಮೆರಿಕದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT