ಶನಿವಾರ, ಜುಲೈ 31, 2021
25 °C

8 ಪೊಲೀಸರ ಹತ್ಯೆ ಪ್ರಕರಣ: ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಪತ್ನಿ, ಮಗನ ಬಂಧನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಲಖನೌ: ಗ್ಯಾಂಗ್‌ಸ್ಟರ್‌ ವಿಕಾಸ್‌ ದುಬೆಯನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದ ಕೆಲವೇ ಗಂಟೆಗಳಲ್ಲಿ ಆತನ ಪತ್ನಿ, ಮಗ ಹಾಗೂ ಸಹಚರನೊಬ್ಬನನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಗುರುವಾರ ಸಂಜೆ ಬಂಧಿಸಿದೆ.

ಕೃಷ್ಟನಗರದಲ್ಲಿರುವ ತಮ್ಮ ನಿವಾಸದಲ್ಲಿ ದುಬೆಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಪತ್ನಿ ರಿಚಾ ದುಬೆಯನ್ನು ಬಂಧಿಸಲಾಗಿದೆ. ಇದೇ ವೇಳೆ ಆತನ ಪುತ್ರ ಮತ್ತು ಒಬ್ಬ ಸಹಚರನನ್ನೂ ಬಂಧಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ದುಬೆ ನಡೆಸುತ್ತಿದ್ದ ಕಾನೂನುಬಾಹಿರ ಚಟುವಟಿಕೆಗಳಿಗೆ ರಿಚಾ ಬೆಂಬಲ ನೀಡುತ್ತಿದ್ದರು ಎನ್ನಲಾಗಿದ್ದು, ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ಜುಲೈ 3ರಂದು ನಡದ 8 ಪೊಲೀಸರ ಹತ್ಯೆ ಪ್ರಕರಣದ ಸಂಚು ರೂಪಿಸುವಲ್ಲಿ ರಿಚಾಳ ಪಾತ್ರವೂ ಇದೆ ಎಂದು ಆರೋಪಿಸಲಾಗಿದೆ.

ಬಿಕ್ರುವಿನಲ್ಲಿ ಸದ್ಯ ನೆಲಸಮಗೊಳಿಸಲಾಗಿರುವ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾವನ್ನು ತನ್ನ ಮೊಬೈಲ್‌ಗೆ ಕನೆಕ್ಟ್‌ ಮಾಡಿಕೊಂಡಿದ್ದ ರಿಚಾ, ತಾನು ಇದ್ದಲ್ಲಿಂದಲೇ ಅಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇರಿಸಿದ್ದಳು ಎನ್ನಲಾಗಿದೆ.

ಪೊಲೀಸರ ಹತ್ಯೆ ಪ್ರಕರಣದ ಬಳಿಕ ಆಕೆ ನಾಪತ್ತೆಯಾಗಿದ್ದಳು.

ರಿಚಾಳನ್ನು ಕಾನ್ಪುರಕ್ಕೆ ಕರೆದೊಯ್ದು ವಿಕಾಸ್‌ ದುಬೆಯೊಂದಿಗೆ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದರು.

ದುಬೆಯನ್ನು ಉಜ್ಜಯನಿಯಲ್ಲಿ ಬಂಧಿಸಿದ್ದ ಮಧ್ಯಪ್ರದೇಶ ಪೊಲೀಸರು ಆತನನ್ನು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆತನನ್ನು ಇಂದು ಕಾನ್ಪುರಕ್ಕೆ ಕರೆತರುವ ವೇಳೆ ಬೆಂಗಾವಲು ವಾಹನ ಮಗುಚಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ದುಬೆ, ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು