ಶನಿವಾರ, ಆಗಸ್ಟ್ 8, 2020
24 °C

‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ರೈಲು: ಚೀನಾ ಕಂಪನಿ ಟೆಂಡರ್ ರದ್ದತಿಗೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅತಿ ವೇಗದ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ರೈಲು ಯೋಜನೆಗೆ ಚೀನಾದ ಸಿಆರ್‌ಆರ್‌ಸಿ ಪಿಯೊನೀರ್ ಎಲೆಕ್ಟ್ರಿಕ್‌ ಕಂಪನಿಗೆ ನೀಡಿದ್ದ ಟೆಂಡರ್‌ ರದ್ದುಗೊಳಿಸಲು ಭಾರತೀಯ ರೈಲ್ವೆ ಚಿಂತನೆ ನಡೆಸಿದೆ. 

ಚೆನ್ನೈನಲ್ಲಿನ ಭಾರತೀಯ ರೈಲ್ವೆ ಕೋಚ್‌ ಫ್ಯಾಕ್ಟರಿ ಹಾಗೂ ಚೀನಾದ ಈ ಕಂಪನಿ ಜಂಟಿಯಾಗಿ ಈ ರೈಲನ್ನು ಅಭಿವೃದ್ಧಿ ಪಡಿಸುವ ಯೋಜನೆ ಇತ್ತು. 2019ರ ಡಿಸೆಂಬರ್‌ನಲ್ಲಿ ಜಾಗತಿಕ ಟೆಂಡರ್‌ ಕರೆಯಲಾಗಿತ್ತು. ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಹೆಸರಿನಲ್ಲಿ 44 ರೈಲುಗಳಿಗೆ ಎಲೆಕ್ಟ್ರಿಕ್‌ ಟ್ರ್ಯಾಕ್ಷನ್‌ ಅಭಿವೃದ್ಧಿ ಪಡಿಸುವ ಹೊಣೆಯನ್ನು ಚೀನಾದ ಈ ಕಂಪನಿಗೆ ನೀಡಲಾಗಿತ್ತು.

ಶುಕ್ರವಾರ ಆರಂಭವಾದ ಹರಾಜು ಪ್ರಕ್ರಿಯೆಯಲ್ಲಿ ಚೀನಾದ ಕಂಪನಿ ಹೊರತು ಪಡಿಸಿ ದೇಶದ ಆರು ಕಂ‍ಪನಿಗಳು ಪಾಲ್ಗೊಂಡಿದ್ದವು. 

ಗಾಲ್ವನ್‌ ಕಣಿವೆಯಲ್ಲಿ ಭಾರತ– ಚೀನಾ ಸೈನಿಕರ ನಡುವಿನ ಸಂಘರ್ಷದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಆದ್ದರಿಂದ ಭಾರತ– ಚೀನಾ ಜಂಟಿ ಸಹಭಾಗಿತ್ವದ ಕಂಪನಿ ಸಲ್ಲಿಸಿರುವ ಬಿಡ್ಅನ್ನು ರೈಲ್ವೆ ಇಲಾಖೆ ತಿರಸ್ಕರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು