ಶುಕ್ರವಾರ, ಏಪ್ರಿಲ್ 23, 2021
22 °C

ವರವರ ರಾವ್ ಆರೋಗ್ಯ ಕುರಿತು ಪಾರದರ್ಶಕ ವರದಿ: ಎನ್ಎಚ್‌‌ಆರ್‌ಸಿಗೆ ಮೊರೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್: ವರವರ ರಾವ್ ಅವರ ಆರೋಗ್ಯ ಸ್ಥಿತಿ ಕುರಿತು ಪಾರದರ್ಶಕ ಮಾಹಿತಿ ನೀಡಬೇಕು ಎಂದು ಮುಂಬೈನ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸುವಂತೆ ಕೋರಿ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ (ಎನ್ಎಚ್ಆರ್‌ಸಿ) ಶುಕ್ರವಾರ ಅರ್ಜಿ ಸಲ್ಲಿಸಿದ್ದಾರೆ.

ವರವರ ರಾವ್ ಅವರ ಆರೋಗ್ಯ ಕುರಿತಂತೆ ಮುಂಬೈನ ನಾನಾವತಿ ಆಸ್ಪತ್ರೆಯು ಮಾಹಿತಿ ನೀಡಲು ನಿರಾಕರಿಸಿದೆ. ಈ ಕಾರಣದಿಂದ ಅರ್ಜಿ ಸಲ್ಲಿಸಲಾಗುತ್ತಿದೆ. ಜೈಲಿನಿಂದ ಅವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಿದಂದಿನಿಂದಲೂ ಮಾಹಿತಿ ನೀಡಿಲ್ಲ. ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದಷ್ಟೇ ತಿಳಿಸಲಾಗಿದೆ ಎಂದು ವಿವರಿಸಿದ್ದಾರೆ.

ಆರೋಗ್ಯ ಸ್ಥಿತಿ ಕುರಿತ ಮಾಹಿತಿ ನಿರಾಕರಿಸುವುದು ಎನ್ಎಚ್ಆರ್‌ಸಿಯ ಜುಲೈ 13ರ ಆದೇಶದ ಉಲ್ಲಂಘನೆ. ರಾವ್ ಅವರಿಗೆ ಅಗತ್ಯ ಚಿಕಿತ್ಸೆ ನೀಡಬೇಕು, ಸಂಬಂಧಿಸಿದ ಮಾಹಿತಿಗಳನ್ನು ಕುಟುಂಬ ಸದಸ್ಯರಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಕುಟುಂಬ ಸದಸ್ಯರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು