ಶುಕ್ರವಾರ, ಸೆಪ್ಟೆಂಬರ್ 17, 2021
29 °C
ವಿಕಾಸ್‌ ದುಬೆ ಎನ್‌ಕೌಂಟರ್‌ ಪ್ರಕರಣ

ವಿಚಾರಣಾ ಆಯೋಗದಿಂದ ಸದಸ್ಯರನ್ನು ಕೈಬಿಡಲು ‘ಸುಪ್ರೀಂ’ ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರೌಡಿಶೀಟರ್‌ ವಿಕಾಸ್‌ ದುಬೆ ಎನ್‌ಕೌಂಟರ್‌ ಬಗ್ಗೆ ತನಿಖೆ ನಡೆಸಲು ರಚಿಸಲಾಗಿರುವ ವಿಚಾರಣಾ ಆಯೋಗದಿಂದ ನಿವೃತ್ತ ನ್ಯಾಯಮೂರ್ತಿ ಶಶಿಕಾಂತ್‌ ಅಗರವಾಲ್‌ ‌ ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸರ ಮಹಾ ನಿರ್ದೇಶಕ ಕೆ.ಎಲ್‌ ಗುಪ್ತಾ ಅವರನ್ನು ಕೈಬಿಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠವು ಅರ್ಜಿದಾರರಿಗೆ ವಿಚಾರಣಾ ಆಯೋಗದ ಸದಸ್ಯರ ಮೇಲೆ ಆಕ್ಷೇಪ ವ್ಯಕ್ತಪಡಿಸಲು ಅನುಮತಿ ಇಲ್ಲ ಎಂದು ಹೇಳಿದೆ. 

ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು ಈ ಆಯೋಗದಲ್ಲಿ ಇದ್ದಾರೆ. ಹಾಗಾಗಿ ಆಯೋಗದ ಸದಸ್ಯರನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. 

ಆಯೋಗದ ಸದಸ್ಯರನ್ನು ತೆಗೆಯುವಂತೆ ಕೋರಿ ಗನ್ಶಾಮ್‌ ಉಪಾಧ್ಯಾಯ ಮತ್ತು ಅನೂಪ್‌ ಪ್ರಕಾಶ್‌ ಅವಸ್ಥಿ ಎಂಬುವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು