ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಹೆಸರು ಬಹಿರಂಗಪಡಿಸುವ ಅಗತ್ಯವೇನಿದೆ: ಬಾಂಬೆ ಹೈಕೋರ್ಟ್‌

Last Updated 10 ಜುಲೈ 2020, 14:06 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌–19 ರೋಗಿಗಳ ವಿವರಗಳನ್ನು ಬಹಿರಂಗಪಡಿಸುವುದರಿಂದ ವ್ಯಕ್ತಿಯ ಗೋಪ್ಯತೆ ಹಕ್ಕಿಗೆ ಧಕ್ಕೆಯಾಗುತ್ತದೆ. ಇಷ್ಟಕ್ಕೂ ಹೆಸರು ಬಹಿರಂಗಪಡಿಸುವ ಅಗತ್ಯವಾದರೂ ಏನಿದೆ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.

ಕೊರೊನಾ ಸೋಂಕಿತರ ಹೆಸರನ್ನು ಬಹಿರಂಗಪಡಿಸುವಂತೆ ಆದೇಶಿಸಬೇಕು ಎಂದು ಕೋರಿಕಾನೂನು ವಿದ್ಯಾರ್ಥಿ ವೈಷ್ಣವಿ ಘೋಲೆವ್‌ ಮತ್ತು ಸೋಲಾಪುರದ ರೈತ ಮಹೇಶ್ ಗಡೇಕರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎ. ಸೈಯದ್‌ ಮತ್ತು ಎಂ.ಎಸ್‌ ಕಾರ್ನಿಕ್ ಅವರಿದ್ದ ವಿಭಾಗೀಯ ಪೀಠ,‘ವ್ಯಕ್ತಿ ಸೋಂಕಿಗೆ ಒಳಗಾದ ನಂತರ ಆ ಪ್ರದೇಶವನ್ನು ಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಲಾಗುತ್ತದೆ. ಇದರಿಂದ ಸ್ಥಳೀಯ ಜನರಿಗೆ ಮಾಹಿತಿ ತಲುಪಿ ಅವರು ಎಚ್ಚೆತ್ತುಕೊಳ್ಳುತ್ತಾರೆ. ಇಷ್ಟು ಸಾಲದೇ?’ ಎಂದು ತಿಳಿಸಿದೆ.

ಹೆಸರು ಬಹಿರಂಗ ಪಡಿಸುವುದರಿಂದ ಸೋಂಕಿತರ ಜೊತೆಗೆ ಸಂಪರ್ಕ ಹೊಂದಿದವರನ್ನು ಗುರುತಿಸುವುದು ಸುಲಭವಾಗುತ್ತದೆ. ಇದರಿಂದ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ಅರ್ಜಿದಾರರು ಪ್ರತಿಪಾದಿಸಿದರು.

ಈ ಸಂಬಂಧ, ಪ್ರತಿಕ್ರಿಯಿಸುವಂತೆಮಹಾರಾಷ್ಟ್ರ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ವಿಚಾರಣೆಯನ್ನು ಎರಡು ವಾರಗಳವರೆಗೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT