ಬುಧವಾರ, ಆಗಸ್ಟ್ 4, 2021
20 °C

ಕೋವಿಡ್‍–19 | ಸಿಎ ಪರೀಕ್ಷೆ ಸಾಧ್ಯತೆ ಪರಿಶೀಲನೆ: ಐಸಿಎಐ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜುಲೈ 29ರಿಂದ ಆಗಸ್ಟ್ 16ರವರೆಗೆ ನಡೆಸಲು ನಿಗದಿಯಾಗಿದ್ದ ಲೆಕ್ಕಪರಿಶೋಧಕರ (ಸಿ.ಎ) ಪರೀಕ್ಷೆಯನ್ನು ಕೋವಿಡ್‍-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆಸುವ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು ಎಂದು ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು (ಐಸಿಎಐ) ಗುರುವಾರ ಸುಪ್ರೀಂ ಕೋರ್ಟ್‍ಗೆ ತಿಳಿಸಿತು.

ನ್ಯಾಯಮೂರ್ತಿ ಎ.ಎಂ.ಖಾನ್‍ವಿಲ್ಕರ್ ನೇತೃತ್ವದ ಪೀಠಕ್ಕೆ ಐಸಿಎಐ ಪರ ವಕೀಲರು, ಈ ಮಾಹಿತಿ ನೀಡಿದರು. ವಿವಿಧ ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದು ಹಾಗೂ ನಿರ್ಬಂಧಗಳ ಜಾರಿ ವಿಷಯವನ್ನು ಪೀಠದ ಗಮನಕ್ಕೆ ತಂದರು.

ಪರೀಕ್ಷಾ ಕೇಂದ್ರಗಳನ್ನು ಸಂಪರ್ಕಿಸಿ ವಾಸ್ತವ ಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲು ಕಾಲಾವಕಾಶ ನೀಡಬೇಕು ಎಂದು ಅವರು ಪೀಠವನ್ನು ಕೋರಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಸಂಜೀವ್‍ ಖನ್ನಾ ಪೀಠದ ಇತರ ಸದಸ್ಯರು.

ಪರೀಕ್ಷಾರ್ಥಿಗಳಿಗೆ ‘ಆಪ್ಟ್‌ ಔಟ್‍’ ಆಯ್ಕೆಯನ್ನು ನೀಡಿರುವ ಐಸಿಎಐ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ವಿಡಿಯೊ ಕಾನ್ಪರೆನ್ಸ್ ಮೂಲಕ ನ್ಯಾಯಪೀಠವು ವಿಚಾರಣೆ ನಡೆಸಿತು. ವಾದಗಳನ್ನು ಆಲಿಸಿದ ಬಳಿಕ ಪ್ರಕರಣದ ವಿಚಾರಣೆಯನ್ನು ಜುಲೈ 10ಕ್ಕೆ ನಿಗದಿಪಡಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು