ಸೋಮವಾರ, ಆಗಸ್ಟ್ 2, 2021
21 °C

ಕ್ವಾರಂಟೈನ್‌ ಕೇಂದ್ರದಲ್ಲಿ 40 ವರ್ಷದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ನವಿ ಮುಂಬೈನ ಕ್ವಾರಂಟೈನ್‌ ಕೇಂದ್ರವೊಂದರಲ್ಲಿ 40 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯು ಪನ್ವೇಲ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು 25 ವರ್ಷದ ಶುಭಮ್ ಖಾಟು ಎಂದು ಗುರುತಿಸಲಾಗಿದೆ.

ಇಂಡಿಯಾ ಬುಲ್ಸ್‌ ಹೆಸರಿನ ಕ್ವಾರಂಟೈನ್‌ ಕೇಂದ್ರದ ಐದನೇ ಮಹಡಿಯಲ್ಲಿ ಮಹಿಳೆಯನ್ನು ಇರಿಸಲಾಗಿತ್ತು. ಎರಡನೇ ಮಹಡಿಯಲ್ಲಿ ಆರೋಪಿ ಇದ್ದನೆಂದು ತಿಳಿದುಬಂದಿದೆ.

ತಾನು ವೈದ್ಯನೆಂದು ಹೇಳಿಕೊಂಡು ಮಹಿಳೆ ವಾಸವಿದ್ದ ಕೋಣೆಯನ್ನು ಪ್ರವೇಶಿಸಿರುವ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ಪ್ರತ್ಯೇಕ ಸ್ಥಳದಲ್ಲಿ ಇರಿಸಿದ್ದಾರೆ. ಆರೋಪಿಯ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಕ್ವಾರಂಟೈನ್‌ಗೆ ಒಳಗಾಗಿದ್ದ ಆರೋಪಿಯ ಕೋವಿಡ್‌ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್‌ ಅಧಿಕಾರಿ ಅಶೋಕ್ ರಜಪೂತ್ ಹೇಳಿದ್ದಾರೆ.

ಇದೇ ವೇಳೆ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆಯ ಕೋವಿಡ್‌ ವರದಿಯು ನೆಗೆಟಿವ್‌ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು