ಬುಧವಾರ, ಜೂನ್ 23, 2021
23 °C

ಹೆಚ್ಚಿನ ಅವಧಿ ದುಡಿಸಿಕೊಳ್ಳುವ ಕಾರ್ಮಿಕರಿಗೆ ಹೆಚ್ಚುವರಿ ವೇತನ: ಕಾರ್ಮಿಕ ಸಚಿವಾಲಯ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಅಧಿಕ ಅವಧಿ ದುಡಿಸಿಕೊಳ್ಳುವ ಕಾರ್ಮಿಕರಿಗೆ ಹೆಚ್ಚುವರಿ ವೇತನವನ್ನು ಕಡ್ಡಾಯವಾಗಿ ನೀಡಬೇಕು ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ.

ಕಾರ್ಮಿಕ ಕಾನೂನುಗಳ ಪ್ರಕಾರ ಹೆಚ್ಚುವರಿ ಅವಧಿಗೆ ದುಡಿಸಿಕೊಳ್ಳುವ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿ ಹಿರಾಲಾಲ್‌ ಸಮರೀಯಾ ಸಂಸದೀಯ ಸದನ ಸಮಿತಿಗೆ ತಿಳಿಸಿದ್ದಾರೆ.

ಲಾಕ್‌ಡೌನ್‌ ಬಳಿಕ ಕೆಲವು ರಾಜ್ಯ ಸರ್ಕಾರಗಳು ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಿ ಕೆಲಸದ ಅವಧಿಯನ್ನು 8 ಗಂಟೆಯ ಬದಲಿಗೆ 12 ಗಂಟೆಗಳ ಅವಧಿಗೆ ಹೆಚ್ಚಳ ಮಾಡಲಾಗಿದೆ. ಸೀಮಿತ ಕಾರ್ಮಿಕರನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಈ ತಿದ್ದುಪಡಿ ಮಾಡಲಾಗಿದೆ. ಹೆಚ್ಚುವರಿ ಅವಧಿ ಕೆಲಸ ಮಾಡುವ ಕಾರ್ಮಿಕರಿಗೆ ದಿನದ ಮೂಲ ವೇತನದ ಶೇ 200ರಷ್ಟನ್ನು ಹಾಗೂ ರಜೆ ದಿನಗಳಲ್ಲಿ ಕೆಲಸ ಮಾಡುವವರಿಗೆ ಶೇ 300ರಷ್ಟು ವೇತನ ನೀಡಬೇಕು ಎಂದು ಹಿರಾಲಾಲ್‌ ತಿಳಿಸಿದ್ದಾರೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿನ ಸರ್ಕಾರಗಳು ಉತ್ಪಾದನೆಯನ್ನು ಹೆಚ್ಚಿಸುವ ಸಲುವಾಗಿ ಕಾರ್ಮಿಕ ಕಾನೂನುಗಳನ್ನು ಸಡಿಲಗೊಳಿಸಿವೆ.

ವಲಸೆ ಕಾರ್ಮಿಕರ ಬಗ್ಗೆ ಹಿರಾಲಾಲ್‌ ಅವರು ಸದನ ಸಮಿತಿಗೆ ಮಾಹಿತಿ ನೀಡಿದರು. ಶ್ರಮಿಕ್‌ ರೈಲುಗಳ ಮುಖಾಂತರ 1.09 ಕೋಟಿ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸಲಾಗಿದೆ ಎಂದು ಹೇಳಿದರು. ಇದನ್ನು ಪ್ರಶ್ನೆ ಮಾಡಿದ ಸದನ ಸಮಿತಿಯ ಮುಖ್ಯಸ್ಥ ಭತೃಹರಿ ಮಹ್ತಾಬ್‌ ಅವರು ಶ್ರಮಿಕ್‌ ರೈಲಿನಲ್ಲಿ ಇತರೆ ಪ್ರಯಾಣಿಕರು ಸೇರಿದಂತೆ ವಿದ್ಯಾರ್ಥಿಗಳು ಪ್ರಯಾಣ ಮಾಡಿರಬಹುದಲ್ಲವೇ? ಎಂದು ಕೇಳಿದರು.

ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯ ಕಾರ್ಡ್ ನೀಡುವಂತೆ ಸದನ ಸಮಿತಿಯು ಸಚಿವಾಲಯಕ್ಕೆ ಸೂಚಿಸಿತು. ಸಾಮಾಜಿಕ ಭದ್ರತೆಯ ಕಾರ್ಡ್‌ ನೀಡುವುದರಿಂದ ವಲಸೆ ಕಾರ್ಮಿಕರು ಸರ್ಕಾರದ ಇತರೆ ಸೌಕರ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಮಿತಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು