ಭಾನುವಾರ, ಜೂನ್ 13, 2021
25 °C

ವಿಶ್ವ ಸ್ನೇಹಿತರ ದಿನ: ಮೋದಿ-ಟ್ರಂಪ್‌ ಚಿತ್ರ ಬಳಸಿ ಅಮೆರಿಕ ರಾಯಭಾರ ಕಚೇರಿ ಶುಭಾಶಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಗತ್ತಿನ ಎರಡು ದೊಡ್ಡ ಪ್ರಜಾತಂತ್ರ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕಗಳ ನಡುವಿನ ಸ್ನೇಹ ಬಂಧ ಬಹಳ ವರ್ಷಗಳಿಂದಲೂ ಸಾಗಿಬಂದಿದೆ. ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ನಡುವಿನ ಗೆಳೆತನದ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. 

ವಿಶ್ವ ಸ್ನೇಹಿತರ ದಿನದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ಶುಭಾಶಯ ಕೋರಿ ಟ್ವೀಟ್‌ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಂತಸದಿಂದ ಹಸ್ತಲಾಘವ ಮಾಡುತ್ತಿರುವ ಚಿತ್ರವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದೆ. 

#HappyFriendshipDay #USIndiaDosti ಎಂಬ ಹ್ಯಾಷ್‌‌ಟ್ಯಾಗ್‌ಗಳನ್ನು ಬಳಸಿ ಅಮೆರಿಕ ಮತ್ತು ಭಾರತದ ಧ್ವಜಗಳ ಸಂಕೇತಗಳನ್ನು ಟ್ವೀಟಿಸಲಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು