ಸೋಮವಾರ, ಆಗಸ್ಟ್ 2, 2021
20 °C

ಯೆಸ್‌ ಬ್ಯಾಂಕ್‌ ಸಹಸಂಸ್ಥಾಪಕ ರಾಣಾ ಕಪೂರ್‌, ವಧವಾನ್‌ ಸಹೋದರರ ಆಸ್ತಿ ಮುಟ್ಟುಗೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಯೆಸ್‌ ಬ್ಯಾಂಕ್‌ ಸಹ–ಸಂಸ್ಥಾಪಕ ರಾಣಾ ಕಪೂರ್‌, ದಿವಾನ್‌ ಹೌಸಿಂಗ್‌ ಫೈನಾನ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ (ಡಿಎಚ್‌ಎಫ್‌ಎಲ್‌) ಪ್ರವರ್ತಕರಾದ ಕಪೀಲ್‌ ಮತ್ತು ಧೀರಜ್‌ ವಧವಾನ್‌ ಹಾಗೂ ಇತರರ ₹2,203 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಈ ಕ್ರಮಕೈಗೊಳ್ಳಲಾಗಿದೆ. ಕಪೂರ್‌ ಅವರ ಕೆಲವು ವಿದೇಶಿ ಆಸ್ತಿಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಮತ್ತು ಪುಣೆಯಲ್ಲಿರುವ ಇತರರ ಸುಮಾರು 12 ಫ್ಲಾಟ್‌ಗಳು ಮತ್ತು ಮನೆಗಳು ಹಾಗೂ ಬ್ಯಾಂಕ್‌ ಖಾತೆಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಪೂರ್‌ ಅವರನ್ನು ಮಾರ್ಚ್‌ ತಿಂಗಳಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ವಶದಲ್ಲಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು