ಅಮೆರಿಕದಲ್ಲಿ 24 ಗಂಟೆಯೊಳಗೆ ಎರಡನೇ ಗುಂಡಿನ ದಾಳಿ; ಓಹಿಯೊದಲ್ಲಿ 10 ಮಂದಿ ಸಾವು

ಡೇಟನ್: ಓಹಿಯೊದಲ್ಲಿನ ಡೇಟನ್ನಲ್ಲಿ ಭಾನುವಾರ ನಡೆದಿರುವ ಗುಂಡಿನ ದಾಳಿಯಲ್ಲಿ ಒಂಬತ್ತು ಮಂದಿ ಸಾವಿಗೀಡಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಾಳಿಕೋರ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. 24 ಗಂಟೆಗಳಲ್ಲಿ ಅಮೆರಿಕದಲ್ಲಿ ನಡೆದಿರುವ ಎರಡನೇ ಸಾಮೂಹಿಕ ದಾಳಿ ಇದಾಗಿದೆ.
ಅರೆಗಾನ್‌ನ ಪ್ರಮುಖ ಬಾರ್‌ವೊಂದರಲ್ಲಿ ರಾತ್ರಿ 1 ಗಂಟೆಗೆ ಈ ಘಟನೆ ನಡೆದಿರುವುದಾಗಿ ಪೊಲೀಸ್ ಲೆಫ್ಟಿನೆಂಟ್ ಕರ್ನಲ್ ಮ್ಯಾಟ್ ಕಾರ್ಪರ್ ಹೇಳಿದ್ದಾರೆ. ಒಬ್ಬ ವ್ಯಕ್ತಿ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಪೊಲೀಸರ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟಿದ್ದಾನೆ. ಕಾರ್ಯಾಚರಣೆಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿ ಗಾಯಗೊಂಡಿಲ್ಲ ಎಂದಿದ್ದಾರೆ.
ದಾಳಿಕೋರ ಹಲವು ಸುತ್ತುಗಳು ಗುಂಡಿನ ದಾಳಿ ನಡೆಸಿದ್ದು, ಅದರಿಂದಾಗಿ 9 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಸುಮಾರು 16 ಜನರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖಾ ತಂಡ ಎಫ್‌ಬಿಐ ಸಹ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ.
ಅತ್ಯಂತ ಸುರಕ್ಷಿತ ಸ್ಥಳವಾಗಿರುವ ಡೇಟನ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ದಾಳಿ ನಡೆಯುವ ಸಮಯದಲ್ಲಿ ಹೆಚ್ಚು ಮಂದಿ ಪೊಲೀಸರು ಸ್ಥಳದಲ್ಲಿದ್ದ ಕಾರಣ, ಇನ್ನೂ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ ಎನ್ನಲಾಗಿದೆ.
ಈ ಘಟನೆಗೂ ಮುನ್ನ ಶನಿವಾರ ಬಂದೂಕು ಹಿಡಿದ ಯುವಕ ಟೆಕ್ಸಾಸ್‌ನ ವಾಲ್‌ಮಾರ್ಟ್ ಮಳಿಗೆಯೊಂದಕ್ಕೆ ಪ್ರವೇಶಿಸಿ ಮನಸ್ಸೇಚ್ಛೆ ಗುಂಡಿನ ದಾಳಿ ನಡೆಸಿದ. ದಾಳಿಯಲ್ಲಿ 20 ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ. 25 ಮಂದಿ ಗಾಯಗೊಂಡಿದ್ದು ದಾಳಿಕೋರನನ್ನು ಬಂಧಿಸಲಾಗಿದೆ.
Today’s shooting in El Paso, Texas, was not only tragic, it was an act of cowardice. I know that I stand with everyone in this Country to condemn today’s hateful act. There are no reasons or excuses that will ever justify killing innocent people....
— Donald J. Trump (@realDonaldTrump) August 4, 2019
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.