ಸೋಮವಾರ, ಏಪ್ರಿಲ್ 6, 2020
19 °C

ಪಾಕ್‌ನ ಬಲೂಚಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 8 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

suicide blast in Quetta on February 17, 2020 (AFP)

ಕರಾಚಿ:  ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ನಡೆಯುತ್ತಿದ್ದಾಗ ಆತ್ಮಾಹುತಿ ದಳ ಬಾಂಬ್ ಸ್ಫೋಟ ನಡೆಸಿದೆ. ಈ ಬಾಂಬ್ ಸ್ಫೋಟದಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ 8 ಜನರು ಸಾವಿಗೀಡಾಗಿದ್ದು 23 ಮಂದಿಗೆ ಗಾಯಗಳಾಗಿವೆ.

ಶಹರನ್ ಇ ಅದಾಲತ್ ರಸ್ತೆ ಬಳಿ ಇರುವ ಕ್ವೆಟ್ಟಾ  ಪ್ರೆಸ್ ಕ್ಲಬ್ ಬಳಿ ಸೋಮವಾರ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ವೇಳೆ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಹಲವಾರು ವಾಹನಗಳಿಗೆ ಹಾನಿಯಾಗಿದೆ ಎಂದು ಡಾನ್ ಸುದ್ದಿಪತ್ರಿಕೆ ವರದಿ ಮಾಡಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟನಿಯೊ ಗುಟೇರಸ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ದಿನವೇ ಈ ದಾಳಿ ನಡೆದಿದೆ.  ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಶೋಧ ಕಾರ್ಯ ಮುಂದುವರಿದಿದೆ. ಆದಾಗ್ಯೂ, ಸ್ಫೋಟದ ಸ್ವರೂಪ ಇಲ್ಲಿಯವರೆಗೆ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು  ಹೇಳಿದ್ದಾರೆ. 

ಮೂವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 8 ಮಂದಿ ಸಾವಿಗೀಡಾಗಿದ್ದು, 23 ಮಂದಿಗೆ ಗಾಯಗಳಾಗಿವೆ ಎಂದು ದುನಿಯಾ ನ್ಯೂಸ್  ವರದಿ ಮಾಡಿದೆ.  ಯಾವುದೇ ಸಂಘಟನೆಗಳು ಇಲ್ಲಿಯವರಿಗೆ ದಾಳಿಯ ಹೊಣೆ ಹೊತ್ತಿಲ್ಲ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು