ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಗ್ಗಲಿಪುರ ನಿವಾಸಿಗಳಿಂದ ಮಾನವ ಸರಪಳಿ ನಿರ್ಮಾಣ

Last Updated 24 ಮಾರ್ಚ್ 2018, 19:49 IST
ಅಕ್ಷರ ಗಾತ್ರ

ಬೆಂಗಳೂರು: ಕಸ ಸುರಿದು ಬೆಂಕಿ ಹಚ್ಚುತ್ತಿರುವುದನ್ನು ವಿರೋಧಿಸಿ ಕನಕಪುರ ಮುಖ್ಯರಸ್ತೆಯ ಕಗ್ಗಲಿಪುರ ನಿವಾಸಿಗಳು ಶನಿವಾರ ಮುಖಗವಸು ಧರಿಸಿ ಮಾನವ ಸರಪಳಿ ನಿರ್ಮಿಸಿದರು.

‘ಕಗ್ಗಲಿಪುರ ಗ್ರಾಮ ಪಂಚಾಯಿತಿ ಸಿಬ್ಬಂದಿಯು ಖಾಲಿ ಜಾಗಗಳಲ್ಲಿ 20ರಿಂದ 30 ಲಾರಿಗಳಷ್ಟು ಕಸವನ್ನು ಸುರಿದಿದ್ದಾರೆ. ಈ ಬಗ್ಗೆ ಎರಡು ವರ್ಷಗಳಿಂದ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡುತ್ತಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ತನಿಶಾ ಚೌಹಾನ್‌ ದೂರಿದರು.

ಆರ್ಟ್ ಆಫ್ ಲಿವಿಂಗ್ ಕೇಂದ್ರದಿಂದ ಬ್ರಿಗೇಡ್ ಮೆಡೋಸ್ ಅಪಾರ್ಟ್‌ಮೆಂಟ್‌ವರೆಗೆ ಕಸ ಸುರಿಯಲಾಗುತ್ತಿದೆ. ಕೆಲವರು ಕಸಕ್ಕೆ ಬೆಂಕಿ ಹಚ್ಚುತ್ತಾರೆ. ಇದರಿಂದ ಈ ಭಾಗದಲ್ಲಿ ನೆಲೆಸಿರುವ ಸುಮಾರು 3,000 ಮಂದಿಗೆ ತೊಂದರೆ ಉಂಟಾಗುತ್ತಿದೆ ಎಂದು ಅಳಲು ತೋಡಿಕೊಂಡರು.

‘ಮಾನವ ಸರಪಳಿ ನಿರ್ಮಿಸುವ ವೇಳೆಗಾಗಲೇ ಕಸ ತುಂಬಿದ್ದ ಎರಡು ಲಾರಿಗಳು ಸ್ಥಳಕ್ಕೆ ಬಂದವು. ಚಾಲಕರು ನಮ್ಮನ್ನು ನೋಡಿ ಲಾರಿಗಳನ್ನು ಬೇರೆಡೆಗೆ ತಿರುಗಿಸಿದರು’ ಎಂದು ದೂರಿದರು.

ಕಸ ಹಾಕಲು ಪ್ರತ್ಯೇಕ ಶೆಡ್‌ ನಿರ್ಮಿಸಲಾಗುತ್ತದೆ. ಕಸ ಸುರಿಯುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಅನಧಿಕೃತವಾಗಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಂಚಾಯಿತಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.

ನಿವಾಸಿಗಳು ‘ಕ್ರೈ ಲೌಡ್‌’ ಎಂಬ ಫೇಸ್‌ಬುಕ್‌ ಖಾತೆಯನ್ನು ತೆರೆದಿದ್ದು, ಪ್ರತಿದಿನದ ಬೆಳವಣಿಗೆಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT