ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯಾ ಬಾಂಬ್‌ ಸ್ಫೋಟ: 3 ಸಾವು

Last Updated 29 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಕಾಬೂಲ್‌: ರಾಜಧಾನಿಯ ದಕ್ಷಿಣ ಹೊರವಲಯದಲ್ಲಿರುವ ಅಫ್ಗಾನ್‌ ವಿಶೇಷ ಸೇನಾ ಪಡೆಯ ನೆಲೆಯ ಸಮೀಪ ಸಂಭವಿಸಿದ ಆತ್ಮಹತ್ಯಾ ಬಾಂಬ್‌ ಸ್ಫೋಟದಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ರಕ್ಷಣಾ ಸಚಿವ ಮತ್ತು ‌ಅಫ್ಗಾನಿಸ್ತಾನದಲ್ಲಿರುವ ಅಮೆರಿಕ ಸೇನಾ ಪಡೆಯ ಕಮಾಂಡರ್‌ ಈ ಪ್ರದೇಶಕ್ಕೆ ಭೇಟಿ ನೀಡಿದ್ದ ಬೆನ್ನಲ್ಲೇ ದಾಳಿ ನಡೆದಿದೆ.‌ದಾಳಿಗೆ ತಾಲಿಬಾನ್‌ ಹೊಣೆ ಎಂದು ಸರ್ಕಾರ ಆರೋಪಿಸಿದೆ.

‘ಇದು ಮಾನವೀಯತೆಯ ವಿರುದ್ಧದ ಅಪರಾಧ.ಸೇನಾ ನೆಲೆ ಮೇಲೆ ದಾಳಿ ನಡೆಸುವುದು ಉಗ್ರರ ಗುರಿಯಾಗಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ಮುಗ್ಧ ಜನರು ಪ್ರಾಣ ಕಳೆದುವಂತಾಯಿತು’ ಎಂದು ಗೃಹ ಇಲಾಖೆ ವಕ್ತಾರತಾರೆಕ್ ಅರಿಯನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT