ಬುಧವಾರ, ಆಗಸ್ಟ್ 4, 2021
20 °C

ಆಫ್ರಿಕಾ: 2 ಲಕ್ಷ ದಾಟಿದ ಕೋವಿಡ್‌ ಪ್ರಕರಣ

ಎಪಿ Updated:

ಅಕ್ಷರ ಗಾತ್ರ : | |

ಜೋಹಾನ್ಸ್‌ಬರ್ಗ್‌: 54 ದೇಶಗಳನ್ನು ಒಳಗೊಂಡಿರುವ ಆಫ್ರಿಕಾ ಖಂಡದಲ್ಲಿ ಕೊರೊನಾ ವೈರಸ್‌ ಸೋಂಕು ತೀವ್ರವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ 2 ಲಕ್ಷ ದಾಟಿದೆ.

‘ಆಫ್ರಿಕಾದಲ್ಲಿ ಈ ವರೆಗೆ 2,02,782 ಕೋವಿಡ್‌–19 ಪ್ರಕರಣಗಳು ವರದಿಯಾಗಿದ್ದು, 5,516 ಜನರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿದೆ’ ಎಂದು ಆಫ್ರಿಕಾ ಸೆಂಟರ್ಸ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಆ್ಯಂಡ್‌ ಪ್ರಿವೆನ್ಷನ್ ಬುಧವಾರ‌ ತಿಳಿಸಿದೆ. 

‘ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು 52,991 ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮೂರನೇ ಒಂದರಷ್ಟು ಸೋಂಕಿತರು ಕೇಪ್‌ಟೌನ್‌ ನಗರದಲ್ಲಿಯೇ ಇದ್ದಾರೆ. ನಂತರದ ಸ್ಥಾನದಲ್ಲಿ ಈಜಿಪ್ಟ್‌ (36,829 ಪ್ರಕರಣ) ಹಾಗೂ ನೈಜೀರಿಯಾ (13,464 ಪ್ರಕರಣ) ಇವೆ’ ಎಂದು ಸಂಸ್ಥೆ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು