ಭಾನುವಾರ, ಜನವರಿ 26, 2020
18 °C

ಗುರುದ್ವಾರ ದಾಳಿ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಸಿಖ್ ಯುವಕನ ಹತ್ಯೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ನಡೆದ ದಾಳಿಗೆ ತೀವ್ರ ವಿರೋಧ ವ್ಯಕ್ತವಾಗಿರುವ ಸಂದರ್ಭದಲ್ಲೇ ಪಾಕಿಸ್ತಾನದ ಪೇಶಾವರದಲ್ಲಿ ಸಿಖ್ ಯುವಕನನ್ನು ಹತ್ಯೆ ಮಾಡಲಾಗಿದೆ.

ರವೀಂದರ್ ಸಿಂಗ್‌ (25) ಎಂಬುವವರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಚಮ್‌ಕನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಭಾನುವಾರ) ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಸಿಖ್‌ ಧರ್ಮ ಸ್ಥಾಪಕ ಗುರುನಾನಕ್ ದೇವ್‌ ಅವರ ಜನ್ಮಸ್ಥಳ ‘ನನಕಾನಾ ಸಾಹಿಬ್‌’ ಗುರುದ್ವಾರದ ಮೇಲೆ ಗುಂಪೊಂದು ಶುಕ್ರವಾರ ಕಲ್ಲುತೂರಾಟ ನಡೆಸಿತ್ತು. ಬಳಿಕ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ದಾಳಿಯಿಂದ ಗುರುದ್ವಾರಕ್ಕೆ ಹಾನಿಯಾಗಿದೆ ಎಂಬ ಆರೋವೂ ವ್ಯಕ್ತವಾಗಿತ್ತು. ದಾಳಿಯನ್ನು ಭಾರತದ ಹಲವು ರಾಜಕೀಯ ಪಕ್ಷಗಳು ಮತ್ತು ಸಿಖ್‌ ಸಂಘಟನೆಗಳು ಖಂಡಿಸಿದ್ದವು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾವನ್ನು ಭಾರತ ಆಗ್ರಹಿಸಿತ್ತು. ಆದರೆ, ಆರೋಪಗಳನ್ನು ತಳ್ಳಿಹಾಕಿದ್ದ ಪಾಕಿಸ್ತಾನ ಸರ್ಕಾರ, ‘ಸಿಖ್‌ ಧರ್ಮಸ್ಥಾಪಕ ಗುರುನಾನಕ್‌ ಅವರ ಜನ್ಮಸ್ಥಳದ ಸ್ಮಾರಕ ಸುರಕ್ಷಿತವಾಗಿದೆ. ಯಾವುದೇ ಧಕ್ಕೆಯಾಗಿಲ್ಲ’ ಎಂದು ಸ್ಪಷ್ಟನೆ ನೀಡಿತ್ತು.

ಇನ್ನಷ್ಟು...

ಪಾಕ್‌ನ ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ದಾಳಿ: ಸಿಖ್ಖರ ರಕ್ಷಣೆಗೆ ಆಗ್ರಹ

ಗುರುದ್ವಾರ ದಾಳಿಗೆ ವ್ಯಾಪಕ ಖಂಡನೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು