ವಾಷಿಂಗ್ಟನ್: ಕೋವಿಡ್–19ರಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲು ವೀಸಾಕ್ಕೆ ಸಂಬಂಧಿಸಿದ ಕಠಿಣ ನಿಯಮಗಳು ಸಹ ಅಡ್ಡಿಯಾಗುತ್ತಿವೆ ಎಂದು ಅಮೆರಿಕದ ಸಂಸದರು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದವರು ಸೇರಿದಂತೆ ವಿವಿಧ ದೇಶಗಳ ವೈದ್ಯರು ಎಚ್–1ಬಿ ಮತ್ತು ಜೆ–1 ವೀಸಾ ಪಡೆದು ಅಮೆರಿಕದಲ್ಲಿದ್ದಾರೆ. ಆದರೆ, ವೀಸಾ ನಿಯಮಗಳು ಕಠಿಣವಾಗಿರುವ ಕಾರಣ ಅವರು ಕೋವಿಡ್–19ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ.

ಭಾರತೀಯರು ಸೇರಿದಂತೆ ಅಮೆರಿಕದಲ್ಲಿ ಸದ್ಯ ನೆಲೆಸಿರುವ ವಿದೇಶಿಯರಿಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ಉಭಯ ಪಕ್ಷಗಳಿಗೆ ಸೇರಿದ 40ಕ್ಕೂ ಹೆಚ್ಚು ಸಂಸದರು ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳ (ಯುಎಸ್‌ಸಿಐಎಸ್) ಹಂಗಾಮಿ ನಿರ್ದೇಶಕ ಕೆನ್ ಕಕಿನೆಲ್ಲಿ ಅವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

‘ಕೋವಿಡ್–19 ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲರಿಗೂ ತುರ್ತು ವೈದ್ಯಕೀಯ ಸೇವೆ ಒದಗಿಸಬೇಕು. ಹೀಗಾಗಿ ವೀಸಾ ನಿಯಮಗಳನ್ನು ಸಡಿಲಿಸುವ ಮೂಲಕ ಅಗತ್ಯವಿರುವ ಎಲ್ಲರಿಗೂ ವೈದ್ಯಕೀಯ ಸೇವೆ ಸಿಗುವಂತಾಗಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.