ಮಂಗಳವಾರ, ಮಾರ್ಚ್ 9, 2021
31 °C

ಪಾಕ್‌ ಜತೆಗಷ್ಟೇ ಕಾಶ್ಮೀರ ವಿವಾದ ಚರ್ಚೆ: ಅಮೆರಿಕದ ಮಧ್ಯಸ್ಥಿಕೆ ತಿರಸ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ದ್ವಿಪಕ್ಷೀಯ ಮಾತುಕತೆ ಅಗತ್ಯವಿದ್ದರೆ, ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ಇರಲಿದೆ ಎಂದು ಭಾರತ ಸ್ಪಷ್ಟಪಡಿಸಿದೆ.  

‘ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಭಾರತ ಹಾಗೂ ಪಾಕಿಸ್ತಾನ ಸರ್ಕಾರ ಇಚ್ಛಿಸಿದಲ್ಲಿ ನಾನು ಸಿದ್ಧನಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗುರುವಾರ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವ ಜೈಶಂಕರ್‌ ಅಮೆರಿಕದ ಮಧ್ಯಸ್ಥಿಕೆ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ. 

ಬ್ಯಾಂಕಾಕ್‌ನಲ್ಲಿ ನಡೆ ಯುತ್ತಿರುವ 9ನೇ ಪೂರ್ವ ಏಷ್ಯಾ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ, ಅಮೆರಿಕ ವಿದೇಶಾಂಗ ಸಚಿವ ಮೈಕ್‌ ಪಾಂಪಿಯೊ ಅವರನ್ನು ಭೇಟಿಯಾಗಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯುವುದಿದ್ದರೆ ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ನಡೆಯಲಿದೆ ಎನ್ನುವುದನ್ನು ಸ್ಪಷ್ಟವಾಗಿ ಪಾಂಪಿಯೊ ಅವರಿಗೆ ತಿಳಿಸಿದ್ದೇನೆ’ ಎಂದು ಶುಕ್ರವಾರ ಟ್ವೀಟ್‌ ಮೂಲಕ ಜೈಶಂಕರ್‌ ತಿಳಿಸಿದ್ದಾರೆ. 

ಮಧ್ಯಸ್ಥಿಕೆಗೆ ಆಗ್ರಹಿಸಿದ್ದ ಮೋದಿ: ಜುಲೈ 22ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಭೇಟಿ ನಂತರ ಶ್ವೇತ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದ ಟ್ರಂಪ್‌, ‘ ಜಪಾನ್‌ನಲ್ಲಿ ಜೂನ್‌ನಲ್ಲಿ ಜಿ–20 ಶೃಂಗಸಭೆ ನಡೆದ ಸಂದರ್ಭದಲ್ಲಿ ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಕೇಳಿ ಕೊಂಡಿದ್ದರು’ ಎಂದು ಹೇಳಿಕೆ ನೀಡಿ ದ್ದರು. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೊಳಗಾಗಿತ್ತು. ಆದರೆ ಭಾರತ ಈ ಹೇಳಿಕೆಯನ್ನು ನಿರಾಕರಿಸಿ, ಮೋದಿ ಮತ್ತು ಟ್ರಂಪ್‌ ನಡುವೆ ಕಾಶ್ಮೀರದ ವಿಷಯವೇ ಚರ್ಚೆಯಾಗಿರಲಿಲ್ಲ ಎಂದಿತ್ತು. ಸಂಸತ್ತಿನಲ್ಲಿ ಈ ಕುರಿತು ಜೈಶಂಕರ್‌ ಸ್ಪಷ್ಟನೆಯನ್ನೂ ನೀಡಿದ್ದರು. 

‘ಪಾಕಿಸ್ತಾನದ ಜತೆ ಮಾತುಕತೆ ನಡೆಸಬೇಕೆಂದರೆ ಮೊದಲು ಗಡಿಯಲ್ಲಿನ ಭಯೋತ್ಪಾದನಾ ಚಟುವಟಿಕೆಗಳನ್ನು ಅಂತ್ಯಗೊಳಿಸಬೇಕು’ ಎಂದು ಉಲ್ಲೇಖಿಸಿದ್ದರು. ‌

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು