ಗುರುವಾರ , ಏಪ್ರಿಲ್ 2, 2020
19 °C

ಅಲ್ಪಸಂಖ್ಯಾತರ ರಕ್ಷಣೆಗೆ ಪಾಕಿಸ್ತಾನ ಬದ್ಧ : ಇಮ್ರಾನ್ ಖಾನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ ವಿರುದ್ಧ ಯಾರಾದರೂ ಅನ್ಯಾಯ, ಅಕ್ರಮ ಎಸೆಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಹೇಳಿದ್ದಾರೆ. ಭಾರತದಲ್ಲಿ ನಡೆಯತ್ತಿರುವ ಹಿಂಸಾಚಾರವನ್ನು ಅವರು ಖಂಡಿಸಿದ್ದಾರೆ.

ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಮತ್ತು ವಿರುದ್ಧ ನಡೆಯತ್ತಿರುವ ಹಿಂಸಾಚಾರ ಕಳೆದ ಭಾನುವಾರದಿಂದ ತೀವ್ರಗೊಂಡಿದ್ದು ಒಟ್ಟು 22 ಜನರು ಮೃತಪಟ್ಟಿದ್ದಾರೆ. 

ಪಾಕಿಸ್ತಾನದಲ್ಲಿ ಯಾರಾದರೂ ಇಲ್ಲಿನ ಮುಸ್ಲಿಮೇತರ ಸಮುದಾಯದ ಜನರು ಮತ್ತು ಅವರ ಅರಾಧನಾಲಯವನ್ನು ಗುರಿಯಾಗಿಸಿ ದಾಳಿ ನಡೆಸಿದರೆ ಅವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಭಾರತದಲ್ಲಿ 20 ಕೋಟಿ ಮುಸ್ಲಿಮರನ್ನು ಗುರಿಯಾಗಿಸಿದ ದಾಳಿ ನಡೆಯುತ್ತಿದೆ. ಇದನ್ನು ಅಂತರರಾಷ್ಟ್ರೀಯ ಸಮುದಾಯವು ತಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದ್ವೇಷದಿಂದ ಕೂಡಿದ ಸಿದ್ಧಾಂತಗಳು ಅಧಿಕಾರಕ್ಕೆ ಬಂದಾಗ, ರಕ್ತಪಾತ ಸಂಭವಿಸುತ್ತದೆ ಎಂದು ಇಮ್ರಾನ್ ಖಾನ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು