ಪಾಕಿಸ್ತಾನದ ನೂತನ ಅಧ್ಯಕ್ಷರಾಗಿ ಆರಿಫ್ ಅಲ್ವಿ ಪ್ರಮಾಣ ವಚನ ಸ್ವೀಕಾರ

ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಅಧ್ಯಕ್ಷರಾಗಿ ಆರಿಫ್ ಅಲ್ವಿ(69) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ಪಾಕಿಸ್ತಾನ ತೆಹ್ರೀಕ್ ಎ ಇನ್ಸಾಫ್(ಪಿಟಿಐ) ಪಕ್ಷದ ಅಭ್ಯರ್ಥಿ ಆರಿಫ್ ಅಲ್ವಿ ಪಾಕಿಸ್ತಾನದ 13ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಐವನ್-ಎ-ಸದ್ರ್ (ಅಧ್ಯಕ್ಷರ ನಿವಾಸ) ದಲ್ಲಿ ಸರಳ ಸಮಾರಂಭ ನಡೆಯಿತು. ಮುಖ್ಯ ನ್ಯಾಯಮೂರ್ತಿ ಸಾಕ್ಬಿ ನಿಸಾರ್ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಸೇನೆಯ ಹಿರಿಯ ಅಧಿಕಾರಿಗಳು, ಪ್ರಧಾನಿ ಇಮ್ರಾನ್ ಖಾನ್, ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಸೌದಿ ಮಾಹಿತಿ ಸಚಿವ ಆಹ್ವಾದ್ ಬಿನ್ ಸಲೆಹ್ ಅಲ್ ಅವಾಡ್ ಭಾಗವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.