ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ಜಾರಿಗೆ ತರುವ ಅಗತ್ಯ ಏನಿತ್ತು: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ

ಬಾಂಗ್ಲಾ ಮೂಲ ನಿವಾಸಿಗಳು ವಾಪಸಾಗಿರುವ ಒಂದು ಪ್ರಕರಣ ಇಲ್ಲ
Last Updated 19 ಜನವರಿ 2020, 13:06 IST
ಅಕ್ಷರ ಗಾತ್ರ

ದುಬೈ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುವ ಅಗತ್ಯ ಏನಿತ್ತು ಎಂದುಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪ್ರಶ್ನಿಸಿದ್ದಾರೆ. ಭಾರತದಲ್ಲಿ ನೆಲೆಯಾಗಿರುವ ಬಾಂಗ್ಲಾ ಮೂಲ ನಿವಾಸಿಗಳು ವಾಪಸಾಗಿರುವ ಒಂದು ಪ್ರಕರಣವೂ ವರದಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ.

ಸಿಎಎಯಿಂದಾಗಿ ಭಾರತದಲ್ಲಿ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಗಲ್ಫ್‌ನ್ಯೂಸ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ಸಿಎಎ ಬಗ್ಗೆ ಬಾಂಗ್ಲಾ ದೇಶದ ಪ್ರಧಾನಿ ಮಾತನಾಡಿದ್ದು ಇದೇ ಮೊದಲು.

ಈ ಕಾಯ್ದೆಯ ಬಗ್ಗೆ ಬಾಂಗ್ಲಾದೇಶದಲ್ಲಿ ಸಾಕಷ್ಟು ಅಸಮಾಧಾನ ವ್ಯಕ್ತವಾಗಿವೆ. ಭಾರತವು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಬಳಿಕ ಬಾಂಗ್ಲಾ ದೇಶದ ಮೂವರು ಮಂತ್ರಿಗಳು ಭಾರತಕ್ಕೆ ಭೇಟಿ ನೀಡುವ ಅಧಿಕೃತ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ.

ಈ ಕಾಯ್ದೆಯನ್ನು ಆತುರಾತುರವಾಗಿ ಜಾರಿ ಮಾಡುವ ಅಗತ್ಯ ಏನಿತ್ತು ಎಂಬುದು ತಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಲ್ಲಿ ಧಾರ್ಮಿಕ ನೆಲೆಯಲ್ಲಿ ಕಿರುಕುಳಕ್ಕೆ ಒಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಿಕೆಯನ್ನು ತ್ವರಿತಗೊಳಿಸುವುದು ಕಾಯ್ದೆಯ ಉದ್ದೇಶ. ಪಾಕಿಸ್ತಾನದ ಜತೆಗೆ ಬಾಂಗ್ಲಾದೇಶವನ್ನು ಯಾಕೆ ಸೇರಿಸಲಾಗಿದೆ ಎಂಬ ಪ್ರಶ್ನೆಯನ್ನು ಬಾಂಗ್ಲಾ ನಾಯಕಿ ಕೇಳುತ್ತಿದ್ದಾರೆ.

ಸಿಎಎ ಮತ್ತುರಾಷ್ಟ್ರೀಯ ಪೌರತ್ವ ನೋಂದಣಿಯಂತಹ (ಎನ್ ಆರ್ ಸಿ ) ವಿಚಾರಗಳು ಭಾರತದ ಆಂತರಿಕ ವಿಷಯ ಎಂದೂ ಶೇಖ್ ಹಸೀನಾ ಅಭಿಪ್ರಾಯಪಟ್ಟಿದ್ದಾರೆ. ಬಾಂಗ್ಲಾ ದೇಶದ ಜನಸಂಖ್ಯೆಯಲ್ಲಿ ಶೇ 10.7ರಷ್ಟು ಹಿಂದೂಗಳಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದುಗಳಿಗೆ ಕಿರುಕುಳ ನೀಡಿದ ಘಟನೆಗಳು ವರದಿಯಾಗಿಲ್ಲ ಎಂದಿದ್ದಾರೆ.

ಮ್ಯಾನ್ಮಾರ್ ನಿಂದ ವಾಪಸಾಗಿರುವರೋಹಿಂಗ್ಯಾ ನಿರಾಶ್ರಿತರಿಗೆ ಬಾಂಗ್ಲಾ ಕಾಕ್ಸ್ ಬಜಾರ್ ಕ್ಯಾಂಪ್ ನಲ್ಲಿ ಆಶ್ರಯ ನೀಡಿರುವುದಾಗಿ ಶೇಖ್ ಹಸೀನಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT