ಬೆಂಗಳೂರು: ಪೆರಿಫೆರಲ್ ವರ್ತುಲ ರಸ್ತೆಗೆ ಭೂಮಿ ಬಿಟ್ಟುಕೊಡುವವರಿಗೆ ಪರಿಹಾರ ನೀಡುವುದು, ಶಿವರಾಮ ಕಾರಂತ ಬಡಾವಣೆಯಲ್ಲಿ ಭೂಮಿ ನೀಡುವವರಿಗೆ, ಅದಕ್ಕೆ ಪ್ರತಿಯಾಗಿ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆ ಮಾಡುವುದು ಸೇರಿದಂತೆ ಅನೇಕ ಮಹತ್ತರ ನಿರ್ಣಯಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಡಳಿತ ಮಂಡಳಿ ಸಭೆಯಲ್ಲಿ ಬುಧವಾರ ತೆಗೆದುಕೊಳ್ಳಲಾಗಿದೆ.