ಭಾನುವಾರ, ಜೂಲೈ 12, 2020
28 °C

ಅಧ್ಯಕ್ಷೀಯ ಚುನಾವಣೆ: ಬಿಡೆನ್‌ ಡೆಮಾಕ್ರಟಿಕ್‌ ಅಭ್ಯರ್ಥಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕದ ಮಾಜಿ ಉಪಾಧ್ಯಕ್ಷ ಜೋ ಬಿಡೆನ್‌ ಅವರು ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಆಗಿರಲಿದ್ದು, ಅಧಿಕೃತವಾಗಿ ಘೋಷಿಸಲಾಗಿದೆ. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಮುಖಾಮುಖಿ ಆಗಲಿದ್ದಾರೆ.

77 ವರ್ಷದ ಬಿಡೆನ್‌ ಅವರು ಭಾರತ ಮತ್ತು ಅಮೆರಿಕ ನಡುವೆ ಬಲವಾದ ಬಾಂಧವ್ಯ ಇರಬೇಕು ಎಂಬುದರ ಪ್ರತಿಪಾದಕರೂ ಹೌದು. ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲು ಬೇಕಿದ್ದ ಬೆಂಬಲವನ್ನು ಗಳಿಸುವಲ್ಲಿ ಅವರು ಯಶಸ್ವಿಯಾದರು.

3,979 ಪ್ರತಿನಿಧಿಗಳ ಪೈಕಿ 1,991 ಮಂದಿ ಬಿಡೆನ್ ಅವರನ್ನು ಬೆಂಬಲಿಸಿದ್ದಾರೆ.

ಡೆಮಾಕ್ರಟಿಕ್ ಪಕ್ಷದ ಹಿರಿಯ ನಾಯಕರಾದ ಬಿಡೆನ್ ಅವರು ಬರಾಕ್ ಒಬಾಮಾ ಅಧ್ಯಕ್ಷರಾಗಿದ್ದಾಗ ಅಮೆರಿಕದ 47ನೇ ಉಪಾಧ್ಯಕ್ಷರಾಗಿ 2009 ರಿಂದ 2017ರವರೆಗೂ ಸೇವೆ ಸಲ್ಲಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು