ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 16 ಸಾವು, 24 ಮಂದಿಗೆ ಗಾಯ

ಶನಿವಾರ, ಏಪ್ರಿಲ್ 20, 2019
31 °C

ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 16 ಸಾವು, 24 ಮಂದಿಗೆ ಗಾಯ

Published:
Updated:

ಕ್ವೆಟ್ಟಾ: ಪಾಕಿಸ್ತಾನದ ಕ್ವೆಟ್ಟಾದಲ್ಲಿರುವ ಹಜಾರಿಗಂಜ್ ತರಕಾರಿ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ 16 ಮಂದಿ ಸಾವಿಗೀಡಾಗಿದ್ದು, 24 ಮಂದಿಗೆ ಗಾಯಗಳಾಗಿವೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಹಜಾರಾ ಸಮುದಾಯದವರನ್ನು ಗುರಿಯಾಗಿರಿಸಿ ಈ ದಾಳಿ ನಡೆದಿದೆ ಎಂದು ಡಿಐಜಿ ಅಬ್ದುಲ್ ರಜಾಕ್ ಚೀಮಾ ಹೇಳಿರುವುದಾಗಿ ಡಾನ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಲೂಗಡ್ಡೆ ಗೋಣಿ ಚೀಲದಲ್ಲಿ ಎಲ್‍ಇಡಿ ಅಡಗಿಸಿಟ್ಟು ಸ್ಫೋಟಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಐಜಿ ಚೀಮಾ ಹೇಳಿದ್ದಾರೆ.  ಕ್ವೆಟ್ಟಾ ದಾಳಿಯಲ್ಲಿ ಸಾವಿಗೀಡಾದವರಲ್ಲಿ 7 ಮಂದಿ ಹಜಾರಾ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಸ್ಫೋಟದ ತೀವ್ರತೆಗೆ ಹತ್ತಿರದ ಕಟ್ಟಡಗಳಿಗೂ ಹಾನಿಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !