ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌: ತಪ್ಪು ಮಾಹಿತಿ ತಡೆಯಲು ತಜ್ಞರ ತಂಡ

Last Updated 9 ಮಾರ್ಚ್ 2020, 20:11 IST
ಅಕ್ಷರ ಗಾತ್ರ

ಲಂಡನ್‌: ‘ಕೋವಿಡ್‌ 19’ ಬಗ್ಗೆ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಬ್ರಿಟನ್‌ ತಜ್ಞರ ತಂಡವೊಂದನ್ನು ರಚಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ತಪ್ಪು ಮಾಹಿತಿ ಹರಡುವುದರಿಂದ ಉಂಟಾಗುವ ಪರಿಣಾಮ ಹಾಗೂ ಪ್ರಭಾವ ಕುರಿತು ಸಂಪೂರ್ಣ ಚಿತ್ರಣ ನೀಡಲು ತಂಡವನ್ನು ರಚಿಸಲಾಗಿದೆ. ತಪ್ಪು ಮಾಹಿತಿಗೆ ಸಮರ್ಥವಾಗಿ ಪ್ರತಿಕ್ರಿಯೆ ನೀಡುವುದು ಮುಖ್ಯ ಉದ್ದೇಶವಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಬ್ರಿಟನ್‌ನಲ್ಲಿ ಈವರೆಗೆ 278 ಪ್ರಕರಣಗಳು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ.

ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ತಜ್ಞರೊಂದು ಸೋಮವಾರ ತುರ್ತು ಸಭೆ ನಡೆಸಿದರು.

‘ತಪ್ಪು ಮಾಹಿತಿ ಹರಡುವುದರ ಬಗ್ಗೆ ಯಾವುದೇ ನಿರ್ದಿಷ್ಟ ಮೂಲವನ್ನು ಗುರುತಿಸಲಾಗಿಲ್ಲ. ಉದ್ದೇಶಪೂರ್ವಕವಾಗಿ ಅಥವಾ ಅಜಾಗರೂಕತೆಯಿಂದ ಸುಳ್ಳು ಮಾಹಿತಿ ಹರಡುವುದನ್ನು ತಡೆಯುವುದು ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮೇಲ್ವಿಚಾರಣೆ ನಡೆಸಲು ಸಾಮಾಜಿಕ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕ ಹೊಒಂದಲಾಗಿದೆ’ ಎಂದು ಸಂಸ್ಕರತಿ ಸಚಿವ ಆಲಿವರ್‌ ಡೌಡೆನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT