ಭಾನುವಾರ, ಮಾರ್ಚ್ 29, 2020
19 °C

ಬ್ರಿಟನ್ ರಾಜಕುಮಾರ ಚಾರ್ಲ್ಸ್‌ಗೆ ಕೊರೊನಾ ವೈರಸ್ ಪಾಸಿಟಿವ್ ದೃಢ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಲಂಡನ್: ಬ್ರಿಟನ್ ಅರಸೊತ್ತಿಗೆಯ ಉತ್ತರಾಧಿಕಾರಿ, ಬ್ರಿಟನ್ ರಾಜಕುಮಾರ ಚಾರ್ಲ್ಸ್‌ಗೆ ಕೊರೊನಾ ವೈರಸ್‌ ಪಾಸಿಟಿವ್ ದೃಢಪಟ್ಟಿದೆ ಎಂದು ಅರಮನೆ ಮೂಲಗಳು ದೃಢಪಡಿಸಿವೆ.

ಬ್ರಿಟನ್ ಮಹಾರಾಣಿ ಎಲಿಜೆಬೆತ್ ಅವರ ಮೊದಲ ಮಗ ಚಾರ್ಲ್ಸ್‌ಗೆ ಈಗ 71 ವರ್ಷ.

'ಪ್ರಿನ್ಸ್ ಆಫ್ ವೇಲ್ಸ್‌ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಕೋವಿಡ್‌-19 ರೋಗ ಲಕ್ಷಣಗಳು ಕಾಣಿಸಿಕೊಂಡಿವೆ. ಉಳಿದಂತೆ ಅವರ ಆರೋಗ್ಯ ಉತ್ತಮವಾಗಿದೆ. ಕಳೆದ ಕೆಲ ದಿನಗಳಿಂದ ಅವರು ಮನೆಯಿಂದಲೇ ಕೆಲಸ ಮಾಡುತ್ತಿದ್ದರು' ಎಂದು ಬ್ರಿಟನ್ ಅರಮನೆಯ ಅಧಿಕಾರಿಗಳು ತಿಳಿಸಿದ್ದಾರೆ.ರಾಜಕುಮಾರ ಚಾರ್ಲ್ಸ್‌ ಅವರ ಪತ್ನಿ ಕ್ಯಾಮಿಲ್ಲಾ ಅವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರ ರಿಪೋರ್ಟ್‌ ಕೊರೊನಾ ವೈರಸ್ ನೆಗೆಟಿವ್ ಬಂದಿದೆ.

'ಈಚಿನ ದಿನಗಳಲ್ಲಿ ರಾಜಕುಮಾರ ಪ್ರಿನ್ಸ್‌ ಸಾಕಷ್ಟು ಜನರನ್ನು ಭೇಟಿಯಾಗಿದ್ದರು. ಯಾರಿಂದ ಅವರಿಗೆ ಸೋಂಕು ತಗುಲಿರಬಹುದು ಎಂಬ ಖಚಿತ ಮಾಹಿತಿ ಲಭ್ಯವಿಲ್ಲ' ಎಂದು ಅರಮನೆ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು