ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಯಾರ್ಕ್: ಗುಂಡಿನ ದಾಳಿಗೆ ನಾಲ್ವರು ಸಾವು

Last Updated 12 ಅಕ್ಟೋಬರ್ 2019, 20:00 IST
ಅಕ್ಷರ ಗಾತ್ರ

ನ್ಯೂಯಾರ್ಕ್‌:ಇಲ್ಲಿನ ಬ್ರೂಕ್‌ಲಿನ್‌ನಲ್ಲಿ ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡರು ಎಂದು ಪೊಲೀಸ್‌ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಗುಂಡಿನ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಂಕಿತನನ್ನು ತಕ್ಷಣವೇ ಗುರುತಿಸಲಾಗಿದೆ ಎಂದು ವಕ್ತಾರ ಅದಂ ನವಾರ‍್ರೊತಿಳಿಸಿದ್ದಾರೆ.

74 ಉಟಿಕಾ ಅವೆಯಲ್ಲಿ ಗುಂಡಿನ ದಾಳಿ ನಡೆದಿರುವ ಕುರಿತು ಮುಂಜಾನೆ ದೂರವಾಣಿ ಕರೆ ಬಂದಿತ್ತು. ಘಟನೆ ನಡೆದ ಕಟ್ಟಡಕ್ಕೆ ಲೈಸೆನ್ಸ್‌ ಇದ್ದು, ಹೆಚ್ಚಿನ ಮಾಹಿತಿ ಇಲ್ಲ ಎಂದು ತಿಳಿಸಿದರು.

ಸ್ಥಳದಲ್ಲಿಯೇ ನಾಲ್ವರು ಸತ್ತರು. ಮಹಿಳೆ ಸೇರಿದಂತೆ ಮೂವರು ಗಾಯಗೊಂಡರು. ಮೃತರ ಗುರುತು ತಕ್ಷಣಕ್ಕೆ ಪತ್ತೆಯಾಗಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT