ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಶಾಂತಿ ವಾತಾವರಣಕ್ಕೆ ಬದ್ಧ: ಚೀನಾ

Last Updated 11 ಮೇ 2020, 20:00 IST
ಅಕ್ಷರ ಗಾತ್ರ

ಬೀಜಿಂಗ್‌: ಗಡಿ ಪ್ರದೇಶದಲ್ಲಿ ತನ್ನ ಸೇನಾ ಪಡೆ ಶಾಂತಿ ಕಾಪಾಡಲು ಬದ್ಧ ಎಂದು ಚೀನಾ ತಿಳಿಸಿದೆ.

ಭಾರತ ಮತ್ತು ಚೀನಾ ಯೋಧರು ಲಡಾಕ್‌ ಮತ್ತು ಸಿಕ್ಕಿಂ ಉತ್ತರ ಭಾಗದ ನಾಕು ಲಾ ಪಾಸ್‌ನಲ್ಲಿ ಇತ್ತೀಚೆಗೆ ನಡೆಸಿದ ಘರ್ಷಣೆ ಕುರಿತು ಎಚ್ಚರಿಕೆಯಿಂದ ಚೀನಾ ಈ ಪ್ರತಿಕ್ರಿಯೆ ನೀಡಿದೆ.

‘ಗಡಿ ವಿಷಯದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಗಡಿ ಪ್ರದೇಶದಲ್ಲಿ ಪ್ರಕ್ಷುಬ್ಧತೆ ಇಲ್ಲದ ವಾತಾವರಣ ನಿರ್ಮಿಸಲು ಚೀನಾ ಸೇನಾ ಪಡೆ ಬದ್ಧವಾಗಿದೆ. ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳು ನಿರಂತರ ಸಂಪರ್ಕದಲ್ಲಿವೆ ಮತ್ತು ಸಮನ್ವಯ ಸಾಧಿಸಿವೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್‌ ಸೋಮವಾರ ತಿಳಿಸಿದ್ದಾರೆ.

ಕೋವಿಡ್‌–19ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಚೀನಾ ಮತ್ತು ಭಾರತ ಕೋವಿಡ್‌–19 ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿವೆ ಮತ್ತು ನಿರಂತರ ಸಂಪರ್ಕದಲ್ಲಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿನ ಭಿನ್ನಾಭಿಪ್ರಾಯಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಶಾಂತಿ ಮತ್ತು ಸ್ಥಿರತೆ ಕಾಪಾಡಬೇಕಾಗಿದೆ’ ಎಂದು ಹೇಳಿದ್ದಾರೆ.

‘ಅಂತರರಾಷ್ಟ್ರೀಯ ಸಮುದಾಯ ಒಗ್ಗಟ್ಟಿನಿಂದ ಹೋರಾಟ ಮಾಡುವ ಪರಿಸ್ಥಿತಿ ಇದಾಗಿದೆ. ಈ ವಿಷಯದಲ್ಲಿ ರಾಜಕೀಯ ಸಲ್ಲದು. ಯಾವುದೇ ರೀತಿಯ ಸಂಘರ್ಷ ಅಥವಾ ಭಿನ್ನಾಭಿಪ್ರಾಯ ಮೂಡಿಸುವ ವಾತಾವರಣಕ್ಕೆ ಅವಕಾಶ ಕಲ್ಪಿಸಬಾರದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT