ಬುಧವಾರ, ಫೆಬ್ರವರಿ 19, 2020
28 °C

ಕೊರೊನಾ ವೈರಸ್‌: ಒಂದೇ ದಿನ 108 ಸಾವು, 1000 ದಾಟಿದ ಬಲಿ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus affected

ಬೀಜಿಂಗ್‌: ಕೊರೊನಾ ವೈರಸ್‌ ಸೋಂಕಿನಿಂದ ಚೀನಾದಲ್ಲಿ ಸೋಮವಾರ ಒಂದೇ ದಿನ 108 ಜನರು ಬಲಿಯಾಗಿದ್ದು, ಈ ಸೋಂಕಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ 1,016ಕ್ಕೆ ಏರಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಮಂಗಳವಾರ ಹೇಳಿದೆ.

ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ ಸಾವಿರ ದಾಟುತ್ತಿದ್ದಂತೆ, ಚೀನಾ ಸರ್ಕಾರವು ಹುಬೈ ಪ್ರಾಂತ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸೋಮವಾರ ಚೀನಾದಲ್ಲಿ 2,478 ಜನರಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ತಗಲಿದ್ದು, ಸೋಂಕು ಬಾಧಿತರ ಸಂಖ್ಯೆ 42,638ಕ್ಕೆ ಏರಿದೆ.

ವುಹಾನ್‌ನಲ್ಲಿ ಈಗಾಗಲೇ 20,000 ವೈದ್ಯಕೀಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಹುಬೈ ಪ್ರಾಂತ್ಯ ವುಹಾನ್‌ ಮೀನು ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು