ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ವಿರೋಧಿ ಚಟುವಟಿಕೆಗೆ ಅಂತರರಾಷ್ಟ್ರೀಯ ಮಟ್ಟದ ಷಡ್ಯಂತ್ರ: ಬಸವರಾಜ ಬೊಮ್ಮಾಯಿ

Last Updated 22 ಫೆಬ್ರುವರಿ 2020, 5:09 IST
ಅಕ್ಷರ ಗಾತ್ರ

ಬೆಂಗಳೂರು: ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕಠಿಣ‌ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಇಂತಹ ದೇಶ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT