ಬೀಜಿಂಗ್: ಕೋವಿಡ್–19 ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಚೀನಾದ ವಾರ್ಷಿಕ ಸಂಸತ್ ಅಧಿವೇಶನ ಶುಕ್ರವಾರ ಆರಂಭವಾಗಿದೆ.

‘ಕೊರೊನಾ ಪಿಡುಗಿನಿಂದಾಗಿ ಚೀನಾ ಹಾಗೂ ವಿಶ್ವದ ಆರ್ಥಿಕತೆ ಕುಸಿದಿದ್ದು, ಅಂತರರಾಷ್ಟ್ರೀಯ ವ್ಯಾಪಾರ ಇಳಿಕೆಯಾಗಿರುವುದರಿಂದ ಸರ್ಕಾರ ಈ ವರ್ಷ ಯಾವುದೇ ಆರ್ಥಿಕ ವೃದ್ಧಿ ದರದ(ಜಿಡಿಪಿ) ಗುರಿ ಇರಿಸಿಲ್ಲ’ ಎಂದು ಚೀನಾ ಪ್ರಧಾನಿ ಲಿ ಕೆಚಾಂಗ್ ತಿಳಿಸಿದರು.

‘ಕೊರೊನಾ ಪಿಡುಗಿನ ಸಂದರ್ಭದಲ್ಲಿ ಮುಂದಿನ ಬೆಳವಣಿಗೆಗಳನ್ನು ಊಹಿಸಲು ಕಷ್ಟ. ಹೀಗಾಗಿ ಜಿಡಿಪಿ ಗುರಿ ಇರಿಸಿಲ್ಲ. 2018ಕ್ಕೆ ಹೋಲಿಸಿದರೆ 2019ರಲ್ಲಿ ಜಿಡಿಪಿ ಶೇ 6.1ರಷ್ಟು ಹೆಚ್ಚಾಗಿದೆ. 1.35 ಕೋಟಿ ಉದ್ಯೋಗವನ್ನು ಸೃಷ್ಟಿಯಾಗಿದ್ದು, ನಿರುದ್ಯೋಗ ಪ್ರಮಾಣ ಶೇ 5.3ರ ಕೆಳಗಿದೆ’ ಎಂದರು.

ಕೊರೊನಾ ವೈರಸ್ ಸೋಂಕಿನ ಕಾರಣ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ಮುಂದೂಡಲಾಗಿತ್ತು. ಶುಕ್ರವಾರ ಭಾರಿ ಭದ್ರತೆಯ ನಡುವೆ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ 2,900ಕ್ಕೂ ಅಧಿಕ ಸದಸ್ಯರು ಅಧಿವೇಶನದಲ್ಲಿ ಭಾಗವಹಿಸಿದರು. ಎಲ್ಲ ಸದಸ್ಯರು ಕಡ್ಡಾಯವಾಗಿ ಕೋವಿಡ್–19 ಪರೀಕ್ಷೆಗೆ ಒಳಪಟ್ಟು ಸಭಾಂಗಣವನ್ನು ಪ್ರವೇಶಿಸಿದರು. ಅಧಿವೇಶನದಲ್ಲಿ ಸೋಂಕಿನಿಂದ ಮೃತಪಟ್ಟ ಜನರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.