ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಆರ್‌ ನಗರ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ಪರ ದೇವೇಗೌಡ ಪ್ರಚಾರ

Last Updated 26 ಮೇ 2018, 10:21 IST
ಅಕ್ಷರ ಗಾತ್ರ

ಬೆಂಗಳೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗುರುತಿನ ಚೀಟಿ ಸಿಕ್ಕ ಕಾರಣಕ್ಕೆ ಮುಂದೂಡಲಾಗಿದ್ದ ಆರ್‌ಆರ್‌ ನಗರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಶನಿವಾರ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

ಇತ್ತ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಯಾಗಿ ಸರ್ಕಾರ ರಚನೆ ಮಾಡಿ, ಮುಖ್ಯಮಂತ್ರಿಯಾಗಿ ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರ ಗದ್ದುಗೆ ಏರಿದ್ದಾರೆ. ನಿನ್ನೆಯಷ್ಟೇ(ಶುಕ್ರವಾರ) ಮೈತ್ರಿ ಸರ್ಕಾರ ಬಹುಮತ ಸಾಬೀತುಪಡಿವೆ. ಆದರೆ, ಇಂದು ಜೆಡಿಎಸ್‌ ವರಿಷ್ಠ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಮೈತ್ರಿ ವಿಧಾನಸೌಧಕ್ಕೆ ಮಾತ್ರ ಸೀಮಿತವೇ? ಎಂಬ ಪ್ರಶ್ನೆ ಎದುರಾಗಿದೆ.

ಆರ್‌ಆರ್‌ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿ.ಎಚ್‌. ರಾಮಚಂದ್ರ ಅವರ ಪ್ರಚಾರ ಮಾಡಿದ ಎಚ್‌.ಡಿ. ದೇವೇಗೌಡ ಅವರು, ಪಕ್ಷದ ಅಧ್ಯಕ್ಷರಾಗಿ ನನ್ನ ಅಭ್ಯರ್ಥಿಗಾಗಿ ಪ್ರಚಾರ ಮಾಡುವುದು ನನ್ನ ಜವಾಬ್ದಾರಿ. ನಾನು ಸಮ್ಮಿಶ್ರ ಸರ್ಕಾರದಲ್ಲಿ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ, ಅದು ಯಾವುದೇ ಅಡಚಣೆಯಿಲ್ಲದೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT