ನೇಪಾಳದಲ್ಲಿ ಹೆಲಿಕಾಪ್ಟರ್ ಅಪಘಾತ: ಪ್ರಯಾಣಿಕರು ನಾಪತ್ತೆ

ಕಠ್ಮಂಡು: ಏಳು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ದಟ್ಟ ಅರಣ್ಯ ಪ್ರದೇಶದಲ್ಲಿ ಶನಿವಾರ ಅಪಘಾತಕ್ಕೀಡಾಗಿದೆ.
ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ‘ಆಲ್ಟಿಟ್ಯೂಡ್ ಏರ್ ಹೆಲಿಕಾಪ್ಟರ್’ ದಾಡಿಂಗ್ ಮತ್ತು ನುವಾಕೊಟ್ ಜಿಲ್ಲೆಯ ಗಡಿಯಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
‘ಜಪಾನಿನ ಚಾರಣಿಗರು ಸೇರಿದಂತೆ ಆರು ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಅದರ ಅವಶೇಷಗಳನ್ನು ಸ್ಥಳೀಯರು ಗುರುತಿಸಿದ್ದಾರೆ’ ಎಂದು ಅಲ್ಟಿಟ್ಯೂಡ್ ಏರ್ ಕಂಪನಿ ವ್ಯವಸ್ಥಾಪಕ ನಿಮಾ ನೂರ್ ಶೆರ್ಪಾ ತಿಳಿಸಿದ್ದಾರೆ.
ಪ್ರಯಾಣಿಕರ ಪರಿಸ್ಥಿತಿ ಹೇಗಿದೆ ಎಂಬುದು ಈವರೆಗೂ ತಿಳಿದುಬಂದಿಲ್ಲ.
ಕಠ್ಮಂಡು ವಿಮಾನ ನಿಲ್ದಾಣದಿಂದ ಬೆಳಿಗ್ಗೆ ಹೊರಟ ಹೆಲಿಕಾಪ್ಟರ್ 20 ಮೈಲು ಕ್ರಮಿಸಿದ ನಂತರ ಬೆಳಿಗ್ಗೆ 8.10 ರಿಂದ ರೆಡಿಯೊ ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಯಾಣಿಕರ ಹುಡುಕಾಟ ನಡೆಸುತ್ತಿದ್ದಾರೆ. ಹೆಲಿಕಾಪ್ಟರ್ಗೆ ಬೆಂಕಿ ಹತ್ತಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಸ್ಥಳಕ್ಕೆ ನೇಪಾಳ ಸೇನಾ ಹೆಲಿಕಾಪ್ಟರ್ ಮತ್ತು ಖಾಸಗಿ ಹೆಲಿಕಾಪ್ಟರ್ನಲ್ಲಿ ರಕ್ಷಣಾ ಸಿಬ್ಬಂದಿಗಳನ್ನು ರವಾನಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.