ಬುಧವಾರ, ಜನವರಿ 29, 2020
30 °C
ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿ ಪ್ರತಿಕ್ರಿಯೆ

ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಿ: ಭಾರತಕ್ಕೆ ಅಮೆರಿಕ, ವಿಶ್ವಸಂಸ್ಥೆ ಸೂಚನೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಭಾರತಕ್ಕೆ ಅಮೆರಿಕ ಮತ್ತು ವಿಶ್ವಸಂಸ್ಥೆ ಸೂಚಿಸಿವೆ. ಪೌರತ್ವ (ತಿದ್ದುಪಡಿ) ಕಾಯ್ದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ಹಲವೆಡೆ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿರುವ ಬೆನ್ನಲ್ಲೇ ಅಮೆರಿಕ ಮತ್ತು ವಿಶ್ವಸಂಸ್ಥೆ ಈ ಕುರಿತು ಪ್ರತಿಕ್ರಿಯೆ ನೀಡಿವೆ.

ಮಾನವಹಕ್ಕುಗಳ ಸಾರ್ವತ್ರಿಕ ಘೋಷಣೆಯಲ್ಲಿ ಉಲ್ಲೇಖಿಸಲಾಗಿರುವ ಮೂಲತತ್ವಗಳನ್ನು ಎತ್ತಿಹಡಿಯುವಂತೆ ಭಾರತಕ್ಕೆ ವಿಶ್ವಸಂಸ್ಥೆ ಸೂಚಿಸಿದೆ. ಪೌರತ್ವ (ತಿದ್ದುಪಡಿ) ಕಾಯ್ದೆಯಲ್ಲಿರುವ ಅಂಶಗಳ ಬಗ್ಗೆ ಅಧ್ಯಯನ ನಡೆಸುತ್ತಿರುವುದಾಗಿಯೂ ಅದು ಹೇಳಿದೆ.

ಕಾಯ್ದೆ ವಿರೋಧಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೆರಿಕವೂ ಹೇಳಿದೆ.

ಇದನ್ನೂ ಓದಿ: Explainer | ಏನಿದು ಪೌರತ್ವ ತಿದ್ದುಪಡಿ ಮಸೂದೆ?

‘ಭಾರತದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ಮಸೂದೆಗೆ ಅನುಮೋದನೆ ಪಡೆದಿರುವ ವಿಚಾರ ನಮಗೆ ತಿಳಿದಿದೆ. ಆ ಕುರಿತು ವ್ಯಕ್ತವಾದ ಸಾರ್ವಜನಿಕ ಅಭಿಪ್ರಾಯಗಳ ಕುರಿತೂ ಮಾಹಿತಿ ಇದೆ. ಮಸೂದೆಯು ಕಾನೂನಾಗಿ ಅನುಷ್ಠಾನಗೊಂಡ ನಂತರದ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ನಡೆಸುತ್ತಿದ್ದೇವೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಅವರ ವಕ್ತಾರ ಫರ್ಹಾನ್ ಹಖ್ ಹೇಳಿದ್ದಾರೆ.

ಬಾಂಗ್ಲಾದೇಶ, ಅಫ್ಗಾನಿಸ್ತಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವುದಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಅಂಕಿತ ಹಾಕಿದ್ದು, ಮಸೂದೆಯು ಕಾಯ್ದೆ ರೂಪ ತಾಳಿತ್ತು. ಇದರ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದಿತ್ತು.

ಇದನ್ನೂ ಓದಿ: ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯ ರಾಜ್ಯಗಳಲ್ಲಿ ಹಿಗ್ಗಿದ ವಿರೋಧ

ಸಂಸತ್‌ನ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾದರೆ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ವಿಧಿಸಬೇಕು ಎಂದು ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅಮೆರಿಕದ ಆಯೋಗ ಅಲ್ಲಿನ ಸರ್ಕಾರವನ್ನು ಇತ್ತೀಚೆಗೆ ಒತ್ತಾಯಿಸಿತ್ತು. ಬಳಿಕ ಈ ಕುರಿತು ಅಮೆರಿಕದ ಆಯೋಗವನ್ನು ಭಾರತ ತರಾಟೆಗೆ ತೆಗೆದುಕೊಂಡಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು