ಶುಕ್ರವಾರ, ಏಪ್ರಿಲ್ 3, 2020
19 °C

ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಂಕಷ್ಟ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಕೊರೊನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿರುವ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟ ಕಾರಣ ಭಾರತೀಯ ವಿದ್ಯಾರ್ಥಿಗಳು ತೀವ್ರ ತೊಂದರೆಗಳನ್ನು ಎದುರಿಸುತ್ತಿದ್ದು, ಅವರ ಸಂಕಷ್ಟ ತಗ್ಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಭಾರತೀಯ ರಾಯಭಾರ ಕಚೇರಿ ಅಮೆರಿಕ ಸರ್ಕಾರಕ್ಕೆ ಮನವಿ ಮಾಡಿದೆ. 

2,00,000ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಅಮೆರಿಕಾದ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿಜ್ಞಾನ, ವೈದ್ಯಕೀಯ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಓದುತ್ತಿರುವವರ ಸಂಖ್ಯೆ ಹೆಚ್ಚಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅಮೆರಿಕದ 300ಕ್ಕೂ ಹೆಚ್ಚು ಉನ್ನತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಮುಚ್ಚಿವೆ. ಹಾಸ್ಟೆಲ್ ಸೌಕರ್ಯಗಳನ್ನು ತೊರೆಯುವಂತೆ ವಿದ್ಯಾರ್ಥಿಗಳಿಗೆ ಕೇಳಿಕೊಳ್ಳಲಾಗಿದೆ.

ಇದರಿಂದ ಭಾರತೀಯ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳು, ಆಹಾರ, ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ಅಮೆರಿಕಾ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಭಾರತ ಮನವಿ ಮಾಡಿದೆ.

ಇದಕ್ಕೆ ಸ್ಪಂದಿಸಿರುವ ಅಮೆರಿಕ ಸರ್ಕಾರ, ‘ಅಮೆರಿಕಾದಲ್ಲಿ ಓದುತ್ತಿರುವ ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೆರಿಕಾ ಸರ್ಕಾರ ತಿಳಿಸಿದೆ‘ ಎಂದು ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತದ ರಾಯಭಾರ ಕಚೇರಿ ಮೂಲಗಳು ಹೇಳಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು